ಮರಾಠಿಗರಿಂದ ಮತ್ತೆ ಪುಂಡಾಟ : ಬೆಳಗಾವಿಯಲ್ಲಿ ಕನ್ನಡ ಬಾವುಟ ಹಿಡಿದ ವಿದ್ಯಾರ್ಥಿ ಮೇಲೆ ಹಲ್ಲೆ

Team Newsnap
1 Min Read

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಪ್ರಕರಣವ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಮರಾಠಿ ಭಾಷಿಕರು ಮತ್ತೆ ಪುಂಡಾಟ ಮೆರೆಯುತ್ತಿದ್ದಾರೆ.

ಕಳೆದ ರಾತ್ರಿ ಬೆಳಗಾವಿಯ ಪ್ರತಿಷ್ಠಿತ ಕಾಲೇಜಿನಲ್ಲಿ ಫೆರವಲ್ ಡೇ ಆಚರಣೆ ವೇಳೆ ಕನ್ನಡ ಬಾವುಟ ಹಿಡಿದು ಡಾನ್ಸ್ ಮಾಡುತ್ತಿದ್ದ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಲಾಗಿದೆ. ಕೆಲ ಮರಾಠಿ ಭಾಷಿಕ ವಿದ್ಯಾರ್ಥಿಗಳು ಆತನ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ.

ಈ ಘಟನೆ ಅತಿರೇಕಕ್ಕೆ ಹೋಗದಂತೆ ತಡೆಯಲು ಕಾಲೇಜು ಸಿಬ್ಬಂದಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಆದರೆಯ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಕಾಲೇಜಿಗೆ ಕರುನಾಡ ವಿಜಯ ಸೇನೆ ಯುವ ಘಟಕದ ಅಧ್ಯಕ್ಷ ಸಂಪತ್ ಕುಮಾರ್ ದೇಸಾಯಿ ಹಾಗೂ ಕಾರ್ಯಕರ್ತರು ಭೇಟಿ ನೀಡಿ ಕಾಲೇಜಿಗೆ ಇಂದು ಮುತ್ತಿಗೆ ಹಾಕೋದಾಗಿ ಕನ್ನಡಪರ ಸಂಘಟನೆ ಎಚ್ಚರಿಕೆ ನೀಡಿದ್ದಾರೆ, ಸ್ಥಳಕ್ಕೆ ಟಿಳಕವಾಡಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article
Leave a comment