ರೈಲಿಗೆ ಸಿಲುಕಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಮೊಸಳೆ ಹೊಸಹಳ್ಳಿಯಲ್ಲಿ ಇಂದು ಜರುಗಿದೆ .
ಪ್ರೀತಿ (18) ಮೃತ ದುರ್ದೈವಿ. ವಿದ್ಯಾರ್ಥಿಯು ರೈಲ್ವೆ ಹಳಿ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ಈ ಘಟನೆ ಕುರಿತಂತೆ ವಿದ್ಯಾರ್ಥಿಗಳು ಒಂದು ಗಂಟೆಯಿಂದ ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.
ರೈಲ್ವೆ ಹಳಿ ದಾಟಲು ಸರಿಯಾದ ವ್ಯವಸ್ಥೆ ಇಲ್ಲ ಎಂದು ಎಲ್ಲ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
ಇನ್ನು, ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ನಿಯಂತ್ರಿಸಲು ಪೊಲೀಸರ ಹರಸಾಹಸ ಪಡುತ್ತಿದ್ದರು. ರಸ್ತೆ ತಡೆ ಹಿನ್ನಲೆಯಲ್ಲಿ ನೂರಾರು ವಾಹನಗಳು ರಸ್ತೆಯಲ್ಲೇ ನಿಂತುಕೊಂಡಿವೆ.
ಈ ಘಟನೆಯಲ್ಲಿ ವಿದ್ಯಾರ್ಥಿಗಳು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶವನ್ನು ಹೊರ ಹಾಕಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸರು ಭೇಟಿ ನೀಡಿ ಪ್ರತಿಭಟನಾಕಾರರ ಮನವೊಲಿಸಲು ಮುಂದಾಗಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು