ಬೀದರ್ ಮೆಡಿಕಲ್ ಕಾಲೇಜಿನಲ್ಲಿ ಹಿಜಬ್ ಧರಿಸಿ ಬಂದ ಕಾರಣ ಕಳೆದ ಬಾರಿ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಿಲ್ಲ ಎಂಬ ವಿಡಿಯೋ ವೈರಲ್ ಆಗಿತ್ತು. ಆದರೆ ಇಂದು ಹಿಜಬ್ ಧರಿಸಿ ಬಂದ ಎಲ್ಲಾ ವಿದ್ಯಾರ್ಥಿಯರಿಗೂ ಪರೀಕ್ಷೆಗೆ ಅನುಮತಿ ನೀಡಲಾಯಿತು.
ಹೈಕೋರ್ಟ್ ಮಧ್ಯಂತರ ಆದೇಶದ ನಡುವೆಯೂ ಕಾಲೇಜಿಗೆ ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರಿಗೆ ನರ್ಸಿಂಗ್ ಪರೀಕ್ಷೆ ಬರೆಯಲು ಬೀದರ್‌ನ ಬ್ರೀಮ್ಸ್ ವೈದ್ಯಕೀಯ ಕಾಲೇಜು ಆಡಳಿತ ಮಂಡಳಿ ಅನುಮತಿ ನೀಡಿದೆ.
ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆಯುತ್ತಿರುವ ಬಿಎಸ್ಸಿ ನರ್ಸಿಂಗ್ ಪರೀಕ್ಷೆಗೆ ಹಿಜಬ್ ಧರಿಸಿಕೊಂಡು ಬಂದ ವಿದ್ಯಾರ್ಥಿನಿಯರ ಹಾಲ್ ಟಿಕೆಟ್ ಹಾಗೂ ಕಾಲೇಜು ಐಡಿ ಕಾರ್ಡ್ ತಪಾಸಣೆ ಮಾಡಿ ನರ್ಸಿಂಗ್ ಪರೀಕ್ಷೆಗೆ ಬ್ರೀಮ್ಸ್ ಕಾಲೇಜು ಆಡಳಿತ ಮಂಡಳಿ ಅವಕಾಶ ಕಲ್ಪಿಸಿದೆ.
ಹಿಜಬ್ ಧರಿಸಿ ಬಂದ ಕಾರಣ ಕಳೆದ ಬಾರಿ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಿಲ್ಲ ಎಂಬ ವಿಡಿಯೋ ವೈರಲ್ ಆಗಿತ್ತು. ಆದರೆ ಇಂದು ಹಿಜಬ್ ಧರಿಸಿ ಬಂದ ಎಲ್ಲಾ ವಿದ್ಯಾರ್ಥಿಯರಿಗೂ ಪರೀಕ್ಷೆಗೆ ಅನುಮತಿ ನೀಡಲಾಯಿತು.
ಈ ಕುರಿತು ಪ್ರತಿಕ್ರಿಯಿಸಿದ ಬ್ರೀಮ್ಸ್ ನಿರ್ದೇಶಕ ಡಾ. ಚಂದ್ರಕಾಂತ್ ಚಿಲ್ಲರ್ಗಿ, ಹಿಜಬ್ ವಿಚಾರವಾಗಿ ನಮ್ಮ ಕಾಲೇಜಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಮಾಮೂಲಿಯಂತೆ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಕಾಲೇಜಿಗೆ ಬಂದಿದ್ದರು.
ಅವರ ಹಾಲ್ ಟಿಕೆಟ್, ಐಡಿ ಕಾರ್ಡ್ ಪರೀಕ್ಷಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ್ದೇವೆ. ಇಂದು 12 ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಬಂದಿದ್ದರು. ಅವರೆಲ್ಲರೂ ಪರೀಕ್ಷೆ ಬರೆದಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು