December 19, 2024

Newsnap Kannada

The World at your finger tips!

teacher, learning, school

CET ಪರೀಕ್ಷೆಯಲ್ಲಿ ಮೊಬೈಲ್​ ಬಳಸಿ ಸಿಕ್ಕಿಬಿದ್ದ ವಿದ್ಯಾರ್ಥಿ

Spread the love

ವೃತ್ತಿ ಶಿಕ್ಷಣ ಕೋರ್ಸ್ ಗಳ ಪ್ರವೇಶಾತಿಗೆ ನಡೆಸುವ ಪರೀಕ್ಷೆಯಲ್ಲಿ ಮೊಬೈಲ್​ ತೆಗೆದುಕೊಂಡು ಹೋಗಿದ್ದ ಈ ವಿದ್ಯಾರ್ಥಿ, ಪ್ರಶ್ನೆಗಳಿಗೆ ಗೂಗಲ್​ನಲ್ಲೇ ಉತ್ತರ ಹುಡುಕುತ್ತಿರುವ ವೇಳೆ ಸಿಕ್ಕಿಬಿದ್ದಿದ್ದಾನೆ.

ಇದನ್ನು ಓದಿ –ಮದ್ದೂರು ಮೂಲದ ಸ್ಯಾಂಡಲ್ ವುಡ್ ನಟ ಸತೀಶ್ ನನ್ನು ಚಾಕುವಿನಿಂದ ಇರಿದು ಕೊಲೆ

ಮೈಸೂರು ಮೂಲದ ಈ ವಿದ್ಯಾರ್ಥಿ ಪರೀಕ್ಷೆ ಬರೆಯುತ್ತಿರುವುದನ್ನು ಗಮನಿಸಿದ ಕೊಠಡಿ ಮೇಲ್ವಿಚಾರಕರು ಅನುಮಾನಗೊಂಡು ಪರಿಶೀಲಿಸಿದಾಗ ಈತನ ಪ್ಯಾಂಟ್​​ ಜೇಬಿನಲ್ಲಿ ಮೊಬೈಲ್​ ಇರುವುದು ಪತ್ತೆಯಾಗಿದೆ.

CET ಪರೀಕ್ಷೆಯಲ್ಲಿ ಮೊಬೈಲ್​ನಲ್ಲಿ ಪ್ರಶ್ನೆಗಳಿಗೆ ಉತ್ತರ ಹುಡುಕಿದ ವಿದ್ಯಾರ್ಥಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಸದ್ಯ ಈತನ ವಿರುದ್ಧ FIR​ ದಾಖಲಾಗಿದೆ.

ಚಿಕ್ಕಮಗಳೂರಿನ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಪರೀಕ್ಷಾ ಕೊಠಡಿಯಲ್ಲಿ ರಸಾಯನ ವಿಜ್ಞಾನ ಪರೀಕ್ಷೆಯಲ್ಲಿ ಮೊಬೈಲ್ ಬಳಕೆ ಮಾಡಿದ್ದು, ಪ್ರಶ್ನೆಪತ್ರಿಕೆಯನ್ನು ಮೊಬೈಲ್​​ನಲ್ಲಿ ಫೋಟೋ ತೆಗೆದುಕೊಂಡಿದ್ದಾನೆ.

ಸಿಇಟಿಯಲ್ಲಿ ಪ್ರಥಮ ಸ್ಥಾನ ಪಡೆಯಬೇಕೆಂಬ ದುರಾಲೋಚನೆಯಿಂದಾಗಿ ಮೊಬೈಲ್​ ಬಳಕೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರಿಗೆ ಮಾಹಿತಿ ಮುಟ್ಟಿಸಿದಾಗ ಸ್ಥಳಕ್ಕಾಗಮಿಸಿದ ಪೊಲೀಸರು ಈತನನ್ನು ವಶಕ್ಕೆ ಪಡೆದು ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Copyright © All rights reserved Newsnap | Newsever by AF themes.
error: Content is protected !!