ಬಾಗಲಕೋಟೆ ಜಿಲ್ಲೆ ಇಳಕಲ್ ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲು ಹಿಜಬ್ ಧರಿಸಿ ವಿದ್ಯಾರ್ಥಿನಿಯರು ಆಗಮಿಸಿದ್ದರು.
ಈ ವೇಳೆ ಅನೇಕ ಮಂದಿ ವಿದ್ಯಾರ್ಥಿನಿಯರು ಹಿಜಬ್ ತೆರೆದಿಟ್ಟು, ಪರೀಕ್ಷಾ ಕೇಂದ್ರದ ಒಳಗೆ ಪರೀಕ್ಷೆ ಬರೆಯಲು ಹೋದರು. ಆದರೆ ವಿದ್ಯಾರ್ಥಿನಿಯೊಬ್ಬಳು ಮಾತ್ರ ಬುರ್ಕಾ ತೆಗೆಯಲು ಒಪ್ಪಲಿಲ್ಲ. ಈ ವೇಳೆ ವಿದ್ಯಾರ್ಥಿನಿ ಮನವೊಲಿಸಲು ಶಿಕ್ಷಕರು ಪರೀಕ್ಷಾ ಸಿಬ್ಬಂದಿ ಯತ್ನಿಸಿದ್ದಾರೆ.
ಆದರೂ ಹಿಜಬ್ ತೆಗೆಯಲು ಒಪ್ಪದ ವಿದ್ಯಾರ್ಥಿನಿ ಕೊನೆಗೆ ಪರೀಕ್ಷೆ ಬರೆಯದೇ ಪೋಷಕರ ಜೊತೆ ಮನೆಗೆ ತೆರಳಿದ್ದಾಳೆ. ಇಂದು ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿನಿಯರು ಹಿಜಬ್ ತೆಗೆಯಲು ಎಲ್ಲಾ ಶಾಲೆಗಳಲ್ಲಿ ಪ್ರತ್ಯೇಕ ಕೊಠಡಿ ವ್ಯವಸ್ಥೆಗೊಳಿಸಲಾಗಿದೆ. ಶಾಲೆಯ ಸುತ್ತಮುತ್ತಲೂ ಪೊಲೀಸ್ ಬಿಗಿ ಬಂದೋಬಸ್ತ್ ಗೊಳಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು