November 14, 2024

Newsnap Kannada

The World at your finger tips!

no extra fee to be collected for NEET JEE IIT exams

ಈಗಿನ‌ ಫಲಿತಾಂಶ ಒಪ್ಪಿಕೊಳ್ಳದ ವಿದ್ಯಾರ್ಥಿಗಳಿಗೆ ಆಗಸ್ಟ್ 19 – ಸೆ. 3 ರವರೆಗೆ ಪಿಯು ವಾರ್ಷಿಕ ಪರೀಕ್ಷೆ

Spread the love

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಎಲ್ಲರಿಗೂ ಪದವಿಗೆ ಅವಕಾಶ ಕಲ್ಪಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಮಧ್ಯೆ ಪರೀಕ್ಷೆ ಬೇಕೆನಿಸುವ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆಗಸ್ಟ್ 19 ರಿಂದ ಸೆಪ್ಟೆಂಬರ್ 3 ರವರೆಗೆ ನಡೆಯಲಿವೆ ಎಂದರು.

2239 ವಿದ್ಯಾರ್ಥಿಗಳು 600 ಕ್ಕೆ 600 ಅಂಕ :

ರಾಜ್ಯದ ಎಲ್ಲಾ 32 ಶೈಕ್ಷಣಿಕ ಜಿಲ್ಲೆಗಳ ಹಲವಾರು ಪದವಿ ಪೂರ್ವ ಕಾಲೇಜುಗಳ ಮಕ್ಕಳು 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ. 2239 ಫ್ರೆಶ್ ವಿದ್ಯಾರ್ಥಿಗಳು ಪೂರ್ಣ ಅಂಕ ದಾಖಲಿಸಿದ್ದಾರೆ ಎಂದು ಸಚಿವರು ತಿಳಿಸಿದರು.

ಯಾವ ಜಿಲ್ಲೆಯಲ್ಲಿ ಎಷ್ಟು?:

ದಕ್ಷಿಣ ಕನ್ನಡ ಜಿಲ್ಲೆಯ 445, ಬೆಂಗಳೂರು ದಕ್ಷಿಣ-302, ಬೆಂಗಳೂರು ಉತ್ತರ-261, ಉಡುಪಿ-149, ಕೊಡಗು-04, ರಾಯಚೂರು/ಚಿಕ್ಕೋಡಿ-07, ಚಾಮರಾಜನಗರ-03, ಯಾದಗಿರಿ ಜಿಲ್ಲೆ-02 ಮಕ್ಕಳು ಪೂರ್ಣ ಅಂಕಗಳನ್ನು ಗಳಿಸಿದ್ದಾರೆ.

ಆಗಸ್ಟ್ ನಲ್ಲಿ ವಾರ್ಷಿಕ ಪರೀಕ್ಷೆ:

ಈ ಬಾರಿಯ ದ್ವಿತೀಯ ಪಿಯು ಫಲಿತಾಂಶವನ್ನು ಒಪ್ಪಿಕೊಳ್ಳಲು ಇಲ್ಲವೇ ತಿರಸ್ಕರಿಸಲು ಈ ಬಾರಿಯ ಪರೀಕ್ಷೆಗೆ ನೋಂದಾಯಿಸಿದ್ದ ಹೊಸ ಮತ್ತು ಪುನರಾವರ್ತಿ ಅಭ್ಯ‌ರ್ಥಿಗಳಿಗೆ ಅವಕಾಶವಿದೆ. ವಾರ್ಷಿಕ ಪರೀಕ್ಷೆಗೆ ಹಾಜರಾಗಲು ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ಈ ಎರಡು ವರ್ಗದ ಅಭ್ಯರ್ಥಿಗಳು ಫಲಿತಾಂಶ ತಿರಸ್ಕರಿಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಜುಲೈ 30 ರಂದು ಕೊನೆ ದಿನವಾಗಿದೆ.

Copyright © All rights reserved Newsnap | Newsever by AF themes.
error: Content is protected !!