ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರ್ಕಾರ 62 ಸಾವಿರ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡಲು ಮುಂದಾಗಿದೆ.
ದೇಶದಲ್ಲಿ ಎಲೆಕ್ಟ್ರಿಕ್ ಚಾರ್ಜಿಂಗ್ ಸೌಕರ್ಯಕ್ಕೂ ವ್ಯವಸ್ಥೆ ಮಾಡಲಾಗುತ್ತಿದೆ. ಈ ಎಲ್ಲಾ ಯೋಜನೆಗಾಗಿ ಕೇಂದ್ರ 10 ಸಾವಿರ ಕೋಟಿ ರುಗಳನ್ನು ಮೀಸಲಿಟ್ಟಿದೆ.
ಸಾರ್ವಜನಿಕ ಹಾಗೂ ವೈಯಕ್ತಿಕ ಬಳಕೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಕೇಂದ್ರ ಸರ್ಕಾರ ಉತ್ತೇಜನ ನೀಡುತ್ತಿದೆ. ಹೀಗಾಗಿ 7000 ಇ ಬಸ್, 5 ಲಕ್ಷ ತ್ರಿಚಕ್ರ ವಾಹನ, 55 ಸಾವಿರ ಇ ನಾಲ್ಕು ಚಕ್ರದ ವಾಹನಗಳು ಹಾಗೂ 10 ಲಕ್ಷ ಇ ಮೊಟಾರ್ ಸೈಕಲ್ಗಳಿಗೆ ಸಬ್ಸಿಡಿ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ.
ಎಲೆಕ್ಟ್ರಿಕ್ ವಾಹನ ಬಳಕೆದಾರರಿಗೆ ಚಾರ್ಜ್ ಮಾಡುವ ಆತಂಕವನ್ನು ದೂರ ಮಾಡುವ ಸಲುವಾಗಿ ಹೆಚ್ಚು ಹೆಚ್ಚು ಚಾರ್ಜಿಂಗ್ ವ್ಯವಸ್ಥೆಯನ್ನು ಮಾಡೋದಾಗಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ಪ್ರಸ್ತುತ ಎಲೆಕ್ಟ್ರಿಕ್ ವಾಹನಗಳ ಮೇಲಿನ ಜಿಎಸ್ಟಿ ಶೇಕಡಾ 5 ರಷ್ಟಿದೆ. ಈ ವಾಹನಗಳ ಮೇಲಿನ ತೆರಿಗೆಯನ್ನು ಮತ್ತಷ್ಟು ಕಡಿಮೆ ಮಾಡುವ ಪ್ರಸ್ತಾಪ ಸಧ್ಯಕ್ಕೆ ಸರ್ಕಾರದ ಮುಂದಿಲ್ಲ ಎಂದೂ ಗಡ್ಕರಿ ಮಾಹಿತಿ ನೀಡಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ನಕ್ಸಲ್ ನಾಯಕ ವಿಕ್ರಂ ಗೌಡ ಎನ್ಕೌಂಟರ್: ಗೃಹಸಚಿವ ಪರಮೇಶ್ವರ್ ದೃಢೀಕರಣ
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ