ನಾನು ಆತ್ಮಹತ್ಯೆ ಮಾಡಿಕೊಳ್ಳುವ ಯಾವುದೇ ಪ್ರಯತ್ನ ಮಾಡಿಲ್ಲ ಎಂದು ಸ್ಯಾಂಡಲ್‍ವುಡ್ ನಟಿ ಭಾಮಾ ಸ್ಪಷ್ಟನೆ ನೀಡಿದ್ದಾರೆ.
ಸಿನಿಮಾ ರಂಗದಿಂದ ಸ್ವಲ್ಪ ದೂರ ಊಳಿದಿದ್ದರೂ ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಇವರ ಕುರಿತಾಗಿ ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ಇದೀಗ ಸ್ವತಃ ನಟಿಯೇ ಸ್ಪಷ್ಟನೆ ನೀಡಿದ್ದಾರೆ.
ನಟಿ ಭಾಮಾ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ನಿದ್ದೆ ಮಾತ್ರೆ ತೆಗೆದುಕೊಂಡು ಸಾಯುವ ಪ್ರಯತ್ನ ಮಾಡಿದ್ದಾರೆ ಎನ್ನುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಇದೀಗ ಈ ವಿಚಾರಕ್ಕೆ ನಟಿ ಭಾಮಾ ಸ್ಪಷ್ಟನೆ ನೀಡಿ ನಾವೆಲ್ಲರೂ ಆರೋಗ್ಯವಾಗಿದ್ದೇವೆ. ನನ್ನ ಬಗ್ಗೆ ಕಾಳಜಿ ತೋರಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಎಂದು ಹೇಳಿದ್ದಾರೆ.
ಮೂಲತಃ ಮಲಯಾಳಂ ನಟಿಯಾದರೂ ಭಾಮಾ, ಯಶ್ ಅವರ ಜೊತೆ ಮೊದಲ ಸಲ ಸಿನಿಮಾ ಮೂಲಕವಾಗಿ ಸ್ಯಾಂಡಲ್‍ವುಡ್‍ಗೆ ಎಂಟ್ರಿ ಕೊಟ್ಟರು. ನಂತರ ಶೈಲೂ ಸಿನಿಮಾಗಳದಲ್ಲಿ ಉತ್ತಮ ನಟನೆಯನ್ನು ಮಾಡುವ ಮೂಲಕವಾಗಿ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ಕೆಲ ವರ್ಷಗಳ ಹಿಂದೆ ಮದುವೆಯಾದ ನಟಿ ಭಾಮಾ, ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು