January 8, 2025

Newsnap Kannada

The World at your finger tips!

rona SUDIP

ಸುದೀಪ್‌ಗೆ ಶುಭ ಕೋರಿದ “ಬಂಗಾರದ ಹುಡುಗ’

Spread the love

ಕನ್ನಡವಲ್ಲದೆ ಇತರ ಭಾಷೆಗಳ ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಕಿಚ್ಚ ಸುದೀಪ್ ನಾಳೆ ತಮ್ಮ ಜನ್ಮದಿನಾಚರಣೆ ಆಚರಿಸಿಕೊಳ್ಳುತ್ತಿದ್ದಾರೆ. ಈ ಬಾರಿಯ ವಿಶೇಷವೆಂದರೆ “ಚಿನ್ನದ ಹುಡುಗ’ ಅಂದರೆ ಟೋಕಿಯೊ ಒಲಿಪಿಂಕ್ಸ್ನಲ್ಲಿ ಜಾವಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಸುದೀಪ್ ಮತ್ತು ವಿಕ್ರಾಂತ್ ರೋಣ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.


ವಿಕ್ರಾಂತ್ ರೋಣ ಚಿತ್ರ ತಂಡ ಟ್ವಿಟರ್ ಖಾತೆಯಲ್ಲಿ ವಿಡಿಯೊ ಹಂಚಿಕೊಂಡಿದೆ. ಇದರಲ್ಲಿ ನೀರಜ್ ಚೋಪ್ರಾ ಕಿಚ್ಚನಿಗೆ ಹುಟ್ಟುಹಬ್ಬದ ವಿಶ್ ಮಾಡಿದ್ದಾರೆ. ಇದು ಸುದೀಪ್ ಅಭಿಮಾನಿಗಳ ಖುಷಿ ಇಮ್ಮಡಿಗೊಳಿಸಿದೆ.


ಚೋಪ್ರಾ ಕೋರಿದ ಶುಭಾಶಯಕ್ಕೆ ಪ್ರತಿಕ್ರಿಯಿಸಿರುವ ಸುದೀಪ್, ನನ್ನ ಸಹೋದರಿನಿಗೆ ಧನ್ಯವಾದಗಳು. ನಿಮಗೆ ಯಾವಾಗಲೂ ನನ್ನ ಶುಭ ಹಾರೈಕೆ ಇರುತ್ತೆ ಎಂದು ಟ್ಟೀಟ್ ಮಾಡಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!