ನವದೆಹಲಿ: ಕೇಂದ್ರ ಸರ್ಕಾರ ಮಹಿಳಾ ದಿನಾಚರಣೆಯಂದೇ ಇನ್ಫೋಸಿಸ್ ( infosys ) ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ (Sudha Murthy) ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.
ಸುಧಾಮೂರ್ತಿ ಅವರ ಸಮಾಜ ಸೇವೆ ಮತ್ತು ಶಿಕ್ಷಣಕ್ಕೆ ನೀಡಿದ ಅತ್ಯುತ್ತಮ ಕೊಡುಗೆಗೆ , ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಈ ವಿಷಯವನ್ನು ಅಧಿಕೃತವಾಗಿ ತಿಳಿಸಿದ್ದಾರೆ.
ರಾಜ್ಯಸಭೆಗೆ ಸುಧಾಮೂರ್ತಿ ಅವರನ್ನು ಭಾರತದ ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಮೂರ್ತಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ.ಮಠದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಬಾಲ ಮಂಜುನಾಥ ಸ್ವಾಮೀಜಿ ಅರೆಸ್ಟ್
ಅವರ ಉಪಸ್ಥಿತಿಯು ರಾಜ್ಯಸಭೆಯಲ್ಲಿ ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ. ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯಕ್ಕೆ ಉದಾಹರಣೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಹಾರೈಸಿದ್ದಾರೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ