ಪಾಕಿಸ್ತಾನದ ಕರಾಚಿಯಲ್ಲಿನ ವಿಶ್ವವಿದ್ಯಾಲಯದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದೆ. ಈ ಕೃತ್ಯದಲ್ಲಿ ಮೂವರು ಚೀನಿ ಪ್ರಜೆಗಳು ಸೇರಿ ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿರುವ ಚೀನಿಯರಲ್ಲಿ ಇಬ್ಬರು ಮಹಿಳಾ ಪ್ರೊಫೆಸರ್.
ಪಾಕ್ನಲ್ಲಿ ತನ್ನನ್ನೇ ತಾನು ಸ್ಫೋಟಿಸಿಕೊಂಡ ಹಿಜಾಬ್ಧಾರಿ ಮಹಿಳೆ 3 ಚೀನಿಯರು ಸೇರಿ ನಾಲ್ವರ ಸಾವನ್ನಪ್ಪಿದ್ದಾರೆ. ಬುರ್ಖಾ ಧರಸಿ ಬಂದ ಮಹಿಳೆ ಒಬ್ಬರು ತನ್ನನ್ನೇ ಸ್ಫೋಟಿಸಿಕೊಂಡಿದ್ದಾಳೆ. ಸ್ಫೋಟಿಸಿಕೊಳ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅದು ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಲೂಚಿಸ್ತಾನ್ ಲಿಬರೇಷನ್ ಫ್ರಂಟ್ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ದೌಡಾಯಿಸಿ, ಗಾಯಗೊಂಡರ ರಕ್ಷಣೆಯಲ್ಲಿ ತೊಡಗಿದ್ದಾರೆ.
ಕ್ಲಾಸ್ ಮುಗಿದ ಬಳಿಕ ಚೈನೀಸ್ ವಿದ್ಯಾರ್ಥಿಗಳು ಮತ್ತು ಲೆಕ್ಚರ್ಗಳನ್ನ ವಾಹನವೊಂದು ಕರೆದುಕೊಂಡು ಬರುತ್ತಿತ್ತು. ಈ ವಾಹನವನ್ನು ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ.
ಚೀನಾ ನಾಗರಿಕರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿರುವುದು ಇದೇ ಮೊದಲಲ್ಲ. ಕಳೆದ ಜುಲೈನಲ್ಲಿ ಇಬ್ಬರು ನಾಗರಿಕನ್ನು ಅಪರಿಚಿತರು ಗುಂಡಿಕ್ಕಿ ಕೊಲೆ ಮಾಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ