January 24, 2022

Newsnap Kannada

The World at your finger tips!

ಅಫ್ಘಾನ್​ನಲ್ಲಿ ಮಸೀದಿ ಮೇಲೆ ಆತ್ಮಾಹುತಿ ಬಾಂಬ್ ದಾಳಿ; 100 ಮಂದಿ ಬಲಿ

Spread the love

ಅಫ್ಘಾನಿಸ್ತಾನದ ಕುಂಡುಜ್ ಪ್ರಾಂತ್ಯದ ಸಯ್ಯದ್ ಅಬಾದ್ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆ ಸಲ್ಲಿಸುವ ವೇಳೆ ಆತ್ಮಾಹುತಿ ಬಾಂಬ್ ದಾಳಿ ನಡೆಸಲಾಗಿದೆ.

ಈ ದುರಂತದಲ್ಲಿ 100 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆಸ್ಫೋಟಸಂಭವಿಸಿದ ಎಂದು ಪ್ರತ್ಯಕ್ಷದರ್ಶಿ ಹೇಳಿದ್ದಾರೆ.

ಸ್ಫೋಟದ ತೀವ್ರತೆಗೆ ಹತ್ತಾರು ಜನರ ದೇಹಗಳ ಛಿದ್ರಛಿದ್ರವಾಗಿದ್ದು ಗುರುತು ಪತ್ತೆಹಚ್ಚುವುದು ಸವಾಲಿನ ಕೆಲಸ ಎಂದು ಹೇಳಲಾಗಿದೆ.
ಈವರೆಗೆ ದಾಳಿಯ ಹಿಂದಿನ ಹೊಣೆಯನ್ನು ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.

ಇತ್ತೀಚೆಗೆ ಕಾಬೂಲ್​ ಏರ್​ಪೋರ್ಟ್​ನಲ್ಲಿ ಇಸ್ಲಾಮಿಕ್ ಸ್ಟೇಟ್ಸ್​ ಖೊರಾಸನ್ ಪ್ರಾಂತ್ಯ ಆತ್ಮಾಹುತಿ ದಾಳಿ ನಡೆಸಿತ್ತು. ಈಗಿನ ದಾಳಿಯನ್ನೂ ಅದೇ ಉಗ್ರ ಸಂಘಟನೆ ಕೈವಾಡ ಇದೆ ಎಂದು ಶಂಕಿಸಲಾಗಿದೆ.

error: Content is protected !!