ಹೆಂಡತಿ ಮುಖ ನೋಡಿ ಮುಜುಗರಕ್ಕೊಳಗಾದ ಆರೋಪಿ, ಬಾಲ್ಕನಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಪೊಲೀಸ್ ಕಸ್ಟಡಿಯಲ್ಲಿರುವ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ.
ಸಿದ್ದಲಿಂಗ ಸ್ವಾಮಿ ಮೃತ ದುರ್ದೈವಿ. ಈತ
ಬಿಡಿಎ ನಕಲಿ ಸೀಲ್, ಲೆಟರ್ ಹೆಡ್ ಬಳಸಿ ₹16 ಲಕ್ಷ ರು ವಂಚಿಸಿದ್ದ ಆರೋಪದ ಮೇಲೆ ಸಿದ್ದಲಿಂಗ ಸ್ವಾಮಿ ವಿರುದ್ಧ ಹನುಮಂತನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ವೇಳೆ ವಿದ್ಯಾರಣ್ಯಪುರದ ಮನೆಯಲ್ಲಿ ಕೆಲ ವಸ್ತುಗಳನ್ನು ಇಟ್ಟಿರುವುದಾಗಿ ಆರೋಪಿ ಪೊಲೀಸರ ಬಳಿ ಹೇಳಿದ್ದಾರೆ.
ಈ ಹಿನ್ನೆಲೆ ಸ್ಥಳ ಮಹಜರಿಗೆ ಕರೆದೊಯ್ದಾಗ, ಹೆಂಡತಿ ಮುಖ ನೋಡಿದನು. ಇದರಿಂದಾಗಿ ಆತನಿಗೆ ಅಪರಾಧಿ ಮನೋಭಾವ, ಮುಜುಗರಕ್ಕೊಳಗಾದ ಹಿನ್ನೆಲೆ ಆರೋಪಿ ಮನೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದನು.
ಈ ಘಟನೆಯಲ್ಲಿ ಸಿದ್ದಲಿಂಗಸ್ವಾಮಿಗೆ ತೀವ್ರ ರಕ್ತಸ್ರಾವವಾಯಿತು. ಖಾಸಗಿ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದನು ಎಂದು ಪೋಲಿಸರು ತಿಳಿಸಿದ್ದಾರೆ.
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
- ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
- ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
- ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
More Stories
ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
ಸಂಸತ್ ಭವನದ ಬಳಿಯ ದಾರುಣ ಘಟನೆ: ವ್ಯಕ್ತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನ
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !