SSLC ಉತ್ತರ ಪತ್ರಿಕೆಯ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿಯಲ್ಲಿ ಜರುಗಿದೆ
ಉಡುಪಿ ಜಿಲ್ಲೆ ಆದಿವುಡುಪಿ ದಿ. ಅಮ್ಮುಂಜೆ ನಾಗೇಶ್ ನಾಯಕ ಸ್ಮಾರಕ ಪ್ರೌಢಶಾಲೆಯಲ್ಲಿ
ರಾಜೇಶ್ ಕುಂದರ್ ತಮ್ಮ ರೈಫಲ್‍ನಿಂದ ಕುತ್ತಿಗೆಗೆ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆದಿಉಡುಪಿ ಪ್ರೌಢಶಾಲೆಯಲ್ಲಿ ಹತ್ತನೇ ತರಗತಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಸ್ಟ್ರಾಂಗ್ ರೂಮ್‍ನಲ್ಲಿ ಇಡಲಾಗಿದೆ.
ಮೂರು ಜನ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರನ್ನು ನೇಮಕ ಮಾಡಲಾಗಿತ್ತು. ಇಂದು ಬೆಳಗಿನ ಜಾವ ಇಬ್ಬರು ಸಿಬ್ಬಂದಿ ಸ್ಥಳದಲ್ಲಿ ಇಲ್ಲದ ಸಂದರ್ಭ ತನ್ನ ರೈಫಲ್‍ನಿಂದ ಕುತ್ತಿಗೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುಂಡು ಹಾರಿದ ರಭಸಕ್ಕೆ ಮೆದುಳಿನ ಭಾಗ ಚಿತ್ರವಾಗಿದೆ. ಮೃತ ದೇಹವು ಕುಳಿತ ಸ್ಥಿತಿಯಲ್ಲಿದೆ
ಉಡುಪಿ ಎಸ್ಪಿ ವಿಷ್ಣುವರ್ಧನ್, ಉಡುಪಿ ನಗರ ಠಾಣಾ ಮತ್ತು ಮಲ್ಪೆ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ. ಮಣಿಪಾಲ ಕೆಎಂಸಿ ಮತ್ತು ಮಂಗಳೂರಿನ ಆರ್‌ಎಫ್‍ಎಸ್‍ಎಲ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆಯನ್ನು ನಡೆಸಿದ್ದಾರೆ. ಪೊಲೀಸ್ ಕರ್ತವ್ಯಕ್ಕೆ ಸಂಬಂಧಪಟ್ಟಂತೆ ಕೆಲದಿನಗಳ ಹಿಂದೆ ರಾಜೇಶ್ ಕುಂದರ್ ಅಮಾನತು ಆಗಿದ್ದರು.
2 ದಿನಗಳ ಹಿಂದೆ ಮತ್ತೆ ರಾಜೇಶ್ ಕುಂದರ್ ಕರ್ತವ್ಯಕ್ಕೆ ಹಾಜರಾಗಿದ್ದರು.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
- ದರ್ಶನ್ ಮಧ್ಯಂತರ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಲು ತೀರ್ಮಾನ
More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ