9 ನೇ ತರಗತಿ ರಮ್ಯಾ ಮೂರ್ತಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ರಮ್ಯಾ ಮೂರ್ತಿ ಟಿ.ದಾಸರಹಳ್ಳಿಯ ಖಾಸಗಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು.
ಕಳೆದ ಅಕ್ಟೋಬರ್ ತಿಂಗಳು ರಮ್ಯಾ ಶಾಲೆಗೆ ಸ್ನಾಕ್ಸ್ ತೆಗೆದುಕೊಂಡು ಹೋಗಿದ್ದಳು. ರಮ್ಯಾ ಶಾಲೆಗೆ ಸ್ನಾಕ್ಸ್ ತೆಗೆದುಕೊಂಡು ಹೋಗಿರುವ ವಿಚಾರ ಶಾಲೆ ಶಿಕ್ಷಕರ ಗಮನಕ್ಕೆ ಬಂದು ಪ್ರಾಂಶುಪಾಲರಿಗೆ ವಿಚಾರ ಗೊತ್ತಾಗಿ ವಿದ್ಯಾರ್ಥಿನಿ ಪೋಷಕರಿಗೆ ಕರೆದು ಎಚ್ಚರಿಕೆ ಕೊಟ್ಟು ಕಳುಹಿಸಿದ್ದರು.
ಶಾಲಾ ಆಡಳಿತ ಮಂಡಳಿಯಿಂದ ಅಸಮಾಧಾನಗೊಂಡ ರಮ್ಯಾ ತಾಯಿ ಶಾಲೆ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರಂತೆ.
ರಮ್ಯಾ ತಾಯಿ ಶಾಲೆ ವಿರುದ್ಧ ದೂರು ನೀಡಿದ್ದರಿಂದ ಶಾಲೆಯಲ್ಲಿ ವಿದ್ಯಾರ್ಥಿನಿ ರಮ್ಯಾಳಿಗೆ ಕಿರುಕುಳ ಕೊಡುತ್ತಿದ್ದ ಕಾರಣಕ್ಕಾಗಿ ಮನನೊಂದು ನಿನ್ನೆ ಮುಂಜಾನೆ ವಾಕಿಂಗ್ ಹೋಗುವಂತೆ ಹೋಗಿ ರೈಲಿಗೆ ತಲೆಕೊಟ್ಟು ರಮ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ರೈಲ್ವೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು