ಮೈಸೂರಿನ ಯುವ ಪ್ರೇಮಿಗಳಿಬ್ಬರು ಕೆ ಆರ್ ಎಸ್ ಹಿನ್ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್‍ನ ನಾರ್ತ್ ಬ್ಯಾಂಕ್ ಬಳಿಯ ಜರುಗಿದೆ.
ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ಮೈಸೂರಿನ ಮೇಟಗಳ್ಳಿ ನಿವಾಸಿಗಳು. ಪರಸ್ಪರ ಸಂಬಂಧಿಕರಾಗಿರುವ ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು.
ನವೆಂಬರ್ 20 ರಂದು ನಿಸರ್ಗಗೆ ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. ಡಿಸೆಂಬರ್ 1 ರ ಮಧ್ಯಾಹ್ನದಿಂದ ಇಬ್ಬರೂ ಮನೆಯಿಂದ ನಾಪತ್ತೆಯಾಗಿದ್ದರು.
ಕೆ.ಆರ್.ಎಸ್ ನ ನಾರ್ತ್ ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಹಿನ್ನೀರಿನಲ್ಲಿ ಇಬ್ಬರ ಮೃತದೇಹ ಪತ್ತೆಯಾಗಿದೆ.
ವೆಲ್ ನಿಂದ ಇಬ್ಬರು ಕೈಕಟ್ಟಿಕೊಂಡು ಹಿನ್ನಿರಿಗೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೆಆರ್‍ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
- ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು