ದ್ವಿತೀಯ ಪಿಯು ಪರೀಕ್ಷೆ ನಡೆಯುವುದು ಸೂಕ್ತ – ಸಚಿವ ಎಸ್.ಸುರೇಶ್ ಕುಮಾರ್

Team Newsnap
1 Min Read

ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಸೂಕ್ತ ಎಂದು ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಸುರೇಶ್ ಕುಮಾರ್, ವೃತ್ತಿಪರ ಶಿಕ್ಷಣಕ್ಕೆ ತಯಾರಿ ನಡೆದಿರುವ ಈ ಹಂತದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ್ದು ಅನಿವಾರ್ಯ ಎಂದರು.

ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕವಾಗುತ್ತದೆ ಎಂದು ಪ್ರತಿಪಾದಿಸಿದರು.

ಪ್ರಸ್ತುತ ಕೋವಿಡ್ ಎಲ್ಲೆಡೆ ತೀವ್ರವಾಗಿದೆ ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ ಎಂದರು.

ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ ಎಂದರು.

Share This Article
Leave a comment