ಸರ್ಕಾರದ ಟ್ರಸ್ಟ್ ಗಳ ಅಧ್ಯಕ್ಷ ಸ್ಥಾನ ನಿರಾಕರಿಸಿದ ಸೂಲಿಬೆಲೆ, ಸಾಹಿತಿ ದೇರ್ಲ

Team Newsnap
1 Min Read
Sulibele, Sahiti Derla who refused the post of president of government trusts ಸರ್ಕಾರದ ಟ್ರಸ್ಟ್ ಗಳ ಅಧ್ಯಕ್ಷ ಸ್ಥಾನ ನಿರಾಕರಿಸಿದ ಸೂಲಿಬೆಲೆ, ಸಾಹಿತಿ ದೇರ್ಲ

ಸಮಯದ ಅಭಾವದಿಂದ ಗಳಗಳನಾಥರ ಟ್ರಸ್ಟ್ ಅಧ್ಯಕ್ಷ ಸ್ಥಾನ ಒಪ್ಪಿಕೊಳ್ಳುವುದಿಲ್ಲ ಎಂದು ಸೂಲಿಬೆಲೆ ಚಕ್ರವರ್ತಿ ಹೇಳಿದರೆ, ವೈಯಕ್ತಿಕ ಕಾರಣಗಳಿಂದಾಗಿ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಅಧ್ಯಕ್ಷ ಸ್ಥಾನವನ್ನು ನಾನು ಸ್ವೀಕರಿಸುವುದಿಲ್ಲ ಎಂದು ಅಂಕಣಗಾರ, ಸೂಕ್ಷ್ಮ ಸಂವೇದನೆಯ ಲೇಖಕ, ಚಲನಶೀಲ ಸಂಶೋಧಕ ನರೇಂದ್ರ ರೈ ದೇರ್ಲ ಅಧ್ಯಕ್ಷ ಸ್ಥಾನವನ್ನು ನಿರಾಕರಿಸಿದ್ದಾರೆ.

allwyn 270619 sulibele1

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವ ದೇರ್ಲ.ಇದನ್ನು ಓದಿ –ರಾಜ್ಯದ ಮದರಸಾಗಳಲ್ಲಿ ಧರ್ಮ ಬೋಧನೆ ತಡೆಗೆ ವಿಶೇಷ ಮಂಡಳಿ ರಚನೆ


ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ’ದ ಅಧ್ಯಕ್ಷನನ್ನಾಗಿ ನನ್ನನ್ನು ನೇಮಕ ಮಾಡಿದ ಸುದ್ದಿ ಮಾಧ್ಯಮಗಳ ಮೂಲಕ ನನಗೆ ತಿಳಿಯಿತು. ತೇಜಸ್ವಿ ಅವರ ಒಡನಾಟ ಮತ್ತು ಅವರ ಕುರಿತು ಒಂದಷ್ಟು ಬರವಣಿಗೆ ಅವರ ಪತ್ರಗಳ ಸಂಪಾದನೆಯನ್ನು ನಾನು ಮಾಡಿರುವುದು ನಿಜ.

ಈ ಕಾರಣಕ್ಕಾಗಿಯೇ ಸರಕಾರ ನನ್ನನ್ನು ಆಯ್ಕೆ ಮಾಡಿದೆ ಎಂದು ಅನೇಕ ಸ್ನೇಹಿತರು, ಬಂಧುಗಳು, ತೇಜಸ್ವಿ ಓದುಗರು ಅಭಿನಂದಿಸಿ ನನಗೆ ಸಂದೇಶ ಕಳಿಸಿದ್ದಾರೆ. ಈ ಕುರಿತು ಘನ ಸರಕಾರಕ್ಕೂ ನನ್ನ ಧನ್ಯವಾದಗಳು. ಆದರೆ ವೈಯಕ್ತಿಕ ಕಾರಣಗಳಿಂದಾಗಿ ಸಂಬಂಧಿಸಿದ ಜವಾಬ್ದಾರಿಯನ್ನು ನಾನು ಸ್ವೀಕರಿಸುವುದಿಲ್ಲ. ಈ ಕುರಿತು ಸಂಬಂಧಿಸಿದ ಯಾವುದೇ ಇಲಾಖೆಯ ವ್ಯಕ್ತಿಗಳು, ಅಧಿಕಾರಿಗಳು ನನ್ನನ್ನು ಈವರೆಗೆ ಸಂಪರ್ಕಿಸಿಯೂ ಇಲ್ಲ. ಅಂತಹ ಪತ್ರ- ಆದೇಶ ನನಗೆ ಬಂದಿಲ್ಲ.

Share This Article
Leave a comment