ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಬಯಸಿ ಬಿಜೆಪಿ ಟಿಕೆಟ್ ವಂಚಿತರಾದ ಸಂಸದೆ ಸುಮಲತಾ ಅಂಬರೀಶ್ ತಮ್ಮ ಮುಂದಿನ ನಿಲುವು ಏನು ಎಂಬುದನ್ನು ಏ.3 ರಂದು ಮಂಡ್ಯದಲ್ಲಿ ಘೋಷಣೆ ಮಾಡಲಿದ್ದಾರೆ.
ಬೆಂಗಳೂರಿನ ಜೆಪಿ ನಗರದ ತಮ್ಮ ನಿವಾಸ ಮಂಡ್ಯ ಜಿಲ್ಲೆಯಿಂದ ಆಗಮಿಸಿದ್ದ ಅಭಿಮಾನಿಗಳ ಅಭಿಪ್ರಾಯ ಆಲಿಸಿದ ನಂತರ ಮಾತನಾಡಿದ ಸುಮಲತಾ ಮೊನ್ನೆಯವರೆಗೂ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿತ್ತು, ಆದರೆ ಮೈತ್ರಿ ಪಕ್ಷಕ್ಕೆ ಕ್ಷೇತ್ರ ಬಿಟ್ಟುಕೊಡಲಾಗಿದೆ, ಬಿಜೆಪಿ ಹೈಕಮಾಂಡ್ ನನ್ನ ಮೇಲೆ ವಿಶ್ವಾಸವಿರಿಸಿ ಸಾಕಷ್ಟು ಪ್ರಯತ್ನ ಮಾಡಿತು ಆದರೆ ಫಲ ಸಿಗಲಿಲ್ಲ ಎಂದರು.
ನಾನು ಎಂದಿಗೂ ಸ್ವಾರ್ಥ ರಾಜಕಾರಣ ಮಾಡಿಲ್ಲ, ತಪ್ಪು ಹೆಜ್ಜೆ ಇರಿಸಿಲ್ಲ, ಮಂಡ್ಯ ಎಂದರೆ ನನಗೆ ಅಭಿಮಾನ, ನಿಮ್ಮನ್ನು ಬಿಟ್ಟು ನಿರ್ಧಾರ ಮಾಡುವುದಿಲ್ಲ. ಅದೇ ರೀತಿ ನಿಮ್ಮನ್ನು ನೋಯಿಸುವ ಸರದಾರ ಕೂಡ ಮಾಡಲ್ಲ, ಮಂಡ್ಯದ ಜನತೆ ನನ್ನ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದೀರಿ, ನಾನು ಯಾವುದೇ ಕಾರಣಕ್ಕೂ ಮಂಡ್ಯ ಬಿಡಲ್ಲ ಎಂದು ಹೇಳಿದರು.
ಅಂಬರೀಶ್ ಜೊತೆಗೆ ಇದ್ದವರು ಇವತ್ತು ನನ್ನೊಂದಿಗೆ ಇದ್ದೀರಿ, ನಿಮ್ಮನ್ನು ವಿಶ್ವಾಸಕ್ಕೆ ಪಡೆಯದೆ ನಾನು ಯಾವುದೇ ನಿರ್ಧಾರ ಮಾಡುವುದಿಲ್ಲ, ನಿಮ್ಮನ್ನು ಕೇಳಿಯೇ ನಾನು ಎಲ್ಲಾ ನಿರ್ಧಾರ ಮಾಡುತ್ತೇನೆ, ಮಂಡ್ಯ ಜಿಲ್ಲೆಯಲ್ಲಿ ಮತ್ತಷ್ಟು ಲಕ್ಷಾಂತರ ಜನತೆ ನನ್ನೊಂದಿಗೆ ಇದ್ದಾರೆ, ಎಲ್ಲರ ಜೊತೆ ಚರ್ಚಿಸಿ ಮುನ್ನಡೆಯ ಬೇಕಾಗಿದೆ ಹಾಗಾಗಿ ಕಾಲಾವಕಾಶ ಬೇಕಾಗಿದ್ದು, ಏಪ್ರಿಲ್ 3 ರಂದು ಮಂಡ್ಯದಲ್ಲಿ ಎಲ್ಲರೊಂದಿಗೆ ಚರ್ಚಿಸಿ ನಿರ್ಧಾರ ಪ್ರಕಟ ಮಾಡುತ್ತೇನೆ ಎಂದು ಘೋಷಿಸಿದರು.ಏ.3 ರಂದು ಯದುವೀರ್ ಒಡೆಯರ್ ನಾಮಪತ್ರ ಸಲ್ಲಿಕೆ
ನನ್ನ ನಂಬಿರುವ ಜನರ ಭವಿಷ್ಯದ ಮೇಲೆ ನನ್ನ ನಿಲುವು ಇರಲಿದೆ, ಮಂಡ್ಯದ ಋಣ ನನ್ನ ಮೇಲಿದೆ ಎಂದು ಹೇಳಿದರು.
More Stories
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
ರಾಜ್ಯದ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ: ಬಿಜೆಪಿಗೆ ಆಘಾತ