ಮಂಡ್ಯ: ಮಂಡ್ಯ ತಾಲೂಕಿನ ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಆರ್ ಎಪಿಸಿಎಂಎಸ್ ನಿರ್ದೇಶಕ ಬೇಲೂರು ಸೋಮಶೇಖರ್ ಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಬೇಲೂರು ಸೋಮಶೇಖರ್ ಅವರು ಮಾಜಿ ಸಂಸದ ಸುಮಲತಾ ಅಂಬರೀಷ್ ಅವರ ಆಪ್ತರಾಗಿದ್ದಾರೆ, ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದಾರೆ.
ಇದನ್ನು ಓದಿ –ಪ್ರಥಮ ಪಿಯುಸಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು
ಕಾಂಗ್ರೆಸ್ ಸೇರ್ಪಡೆಗೊಂಡ ಬೇಲೂರು ಸೋಮಶೇಖರ್ ಅವರನ್ನು ಮನ್ ಮುಲ್ ನಿರ್ದೇಶಕ ಯು.ಸಿ.ಶಿವಪ್ಪ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಹೊಸಹಳ್ಳಿ ಶಿವಲಿಂಗೇಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ನಗರಸಭಾ ಮಾಜಿ ಸದಸ್ಯ ಅನಿಲ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸಿ.ಕೆ.ನಾಗರಾಜ್, ಬಿಳಿದೇಗಲು ಬೋರೇಗೌಡ,ಮಹಾದೇವ ಇದ್ದರು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು