ದೆಹಲಿಯಲ್ಲಿಂದು ಹೊಸ ಸಂಸತ್ ಭವನ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಮಂಡ್ಯ ಸಂಸದೆ ಸುಮಲತಾ ಪಾಲ್ಗೊಂಡಿದ್ದರು.
ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಂಡ ಸಂಸದೆ, ಪ್ರಜಾಪ್ರಭುತ್ವ ಪವಿತ್ರ ಭವನದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶವೇ ಒಂದು ಭಾಗ್ಯ ಎಂದಿದ್ದಾರೆ.
ಅನೇಕ ಸಂಸದರು ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮಂಡ್ಯ ಸಂಸದೆ ಸುಮಲತಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು ವಿಶೇಷವಾಗಿತ್ತು.
2022ರ ವೇಳೆಗೆ ಹೊಸ ಸಂಸತ್ ಕಟ್ಟಡ ನಿರ್ಮಾಣಗೊಳ್ಳುವ ನಿರೀಕ್ಷೆಯಿದೆ. ಭವನದ ನಿರ್ಮಾಣದಲ್ಲಿ ಸುಮಾರು 2,000 ಕಾರ್ಮಿಕರು 861.90 ಕೋಟಿ ವೆಚ್ಚ ತಗುಲಲಿದೆ.
ಕಾರ್ಯಕ್ರಮದಲ್ಲಿ 200 ಅತಿಥಿಗಳು ಪಾಲ್ಗೊಂಡಿದ್ದರು. ಸುಮಲತಾ ಕೂಡ
ಆ 200 ಜನರಲ್ಲಿ ಒಬ್ಬರಾಗಿ ಮಂಡ್ಯ ಪ್ರತಿನಿಧಿಸಿದ್ದರು ಎಂಬುದೇ ಹೆಮ್ಮೆ.
ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ
ಮಾಜಿ ಪ್ರಧಾನಿ ದೇವೇಗೌಡರಿಗೆ ಕೇಂದ್ರ ಸರ್ಕಾರವು ಕಾರ್ಯಕ್ರಮಕ್ಕೆ ಅಧೀಕೃತ ಆಹ್ವಾನ
ನೀಡಿದ್ದರೂ, ಆರೋಗ್ಯದ ಏರುಪೇರು ಗಳಿಂದ ದೆಹಲಿಗೆ ಹೋಗಲು ಸಾಧ್ಯವಾಗಲಿಲ್ಲ ಎಂದು ದೇವೇಗೌಡರು ಹೇಳಿದ್ದಾರೆ.
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
- ಮರಕ್ಕೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರ ದುರ್ಮರಣ
- ಬ್ಯಾಂಕ್ ಆಫ್ ಬರೋಡಾ: 1267 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ