ರೆಬಲ್ ಸ್ಟಾರ್ ಅಂಬರೀಶ್ ಅವರ 71 ನೇ ವರ್ಷದ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದ ಪತ್ನಿ, ನಟಿ, ಸಂಸದೆ ಸುಮಲತಾ ಅಂಬರೀಶ್ ಭಾವುಕ ಪತ್ರವೊಂದನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. ಹಾಗಾಗಿ ನಿಮ್ಮ ಹುಟ್ಟು ಹಬ್ಬ ಅದೊಂದು ಸಡಗರವಾಗಿರುತ್ತಿತ್ತು. ಅದು ನಮಗಷ್ಟೇ ಅಲ್ಲ, ಅಭಿಮಾನಿಗಳ ಪಾಲಿಗೆ ನಿಜವಾದ ಹಬ್ಬವೂ ಆಗಿತ್ತು.
ಭೌತಿಕವಾಗಿ ನಮ್ಮೊಂದಿಗೆ ನೀವು ಇದ್ದಿದ್ದರೆ, ಇಂದು 71ನೇ ವರ್ಷದ ಹುಟ್ಟು ಹಬ್ಬವನ್ನೂ ಅಭಿಮಾನಿಗಳ ಜೊತೆಯಾಗಿ ಮತ್ತಷ್ಟು ಅದ್ಧೂರಿಯಾಗಿ ಆಚರಿಸುತ್ತಿದ್ದೆವು’ ಎಂದು ಬರೆದಿದ್ದಾರೆ.
ಹುಟ್ಟು ಹಬ್ಬದ ದಿನ ಮನೆ ಮುಂದೆ ಜನಸಾಗರ, ನಿಮ್ಮ ಆರ್ಭಟ, ಹಾಸ್ಯ ಪ್ರಜ್ಞೆಯ ಮಾತು, ರಾತ್ರಿ ಇಡೀ ಕಾಯುತ್ತಾ ನಿಂತಿದ್ದ ಅಭಿಮಾನಿಗಳ ಘೋಷಣೆ ಇನ್ನೂ ಹಾಗೆಯೇ ಇದೆ. ಇವತ್ತೂ ಕೂಡ ಅವೆಲ್ಲವೂ ನಿಮಗೆ ಶುಭಾಶಯ ಹೇಳುತ್ತಿವೆ. ಸ್ವೀಕರಿಸಿ.
ಹ್ಯಾಪಿ ಬರ್ತಡೇ ಮೈ ಅಂಬಿ. ಜತೆಗಿರದ ಜೀವ ಎಂದೆಂದಿಗೂ ಜೀವಂತ’ ಎಂದು ಸುಮಲತಾ ಪೋಸ್ಟ್ ಮಾಡಿದ್ದಾರೆ.
ಅಂಬರೀಶ್ ಸಿನಿಮಾ ರಂಗದ ಅಜಾತಶತ್ರು. ಹಿರಿ ಕಿರಿಯರ ಜೊತೆ ಒಳ್ಳೆಯ ಬಾಂಧವ್ಯವನ್ನು ಇಟ್ಟುಕೊಂಡಿದ್ದರು. ಸಿನಿಮಾ ರಂಗದಲ್ಲಿ ಏನೇ ಸಮಸ್ಯೆಯಾದರೂ ಅದನ್ನು ಬಗೆಹರಿಸುವ ತಾಕತ್ತು ಕೇವಲ ಅಂಬರೀಶ್ ಅವರಿಗೆ ಮಾತ್ರವಿತ್ತು. 5 ಗ್ಯಾರಂಟಿ `ಬ್ಲೂಪ್ರಿಂಟ್’ ಸಿದ್ದವಾಗುತಿದ್ದೆ: ಡಿಸಿಎಂ
ನೂರಾರು ಚಿತ್ರಗಳಲ್ಲಿ ನಟಿಸಿ, ಅನೇಕರ ಬದುಕಿಗೆ ಆಸರೆಯಾಗಿದ್ದರು. ಹಾಗಾಗಿ ಸಿನಿಮಾ ರಂಗ ಕೂಡ ಅಂಬಿ ಹುಟ್ಟು ಹಬ್ಬಕ್ಕೆ ಶುಭಾಶಯ ಕೋರಿದೆ.