December 22, 2024

Newsnap Kannada

The World at your finger tips!

sumalatha BJP

ಸುಮಲತಾ ಅಂಬರೀಶ್‌ ಬಿಜೆಪಿ ಗೆ ಸೇರ್ಪಡೆ

Spread the love

ಬೆಂಗಳೂರು : ಇಂದು ಯಡಿಯೂರಪ್ಪ ನವರ ಸಮ್ಮುಖದಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಭಾರತೀಯ ಜನತಾ ಪಕ್ಷ (BJP) ಕ್ಕೆ ಸೇರ್ಪಡೆಯಾಗಿದ್ದಾರೆ.

ಬಿಜೆಪಿ ನಾಯಕರು ಸುಮಲತಾ ಅವರಿಗೆ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಬಾವುಟ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.

ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರವಾಲ್ ಸುಮಲತಾ ಅವರಿಗೆ ಪಕ್ಷದ ಪ್ರಾಥಮಿಕ ಸದಸ್ಯತ್ವದ ಪತ್ರ ನೀಡಿದ್ದಾರೆ.

ದೊಡ್ಡ ಗಣೇಶ್, ಕೊಪ್ಪಳ ಮಾಜಿ ಸಂಸದ ಎಸ್ ಶಿವರಾಮೇಗೌಡ (ಕಾಂಗ್ರೆಸ್ ತೊರೆದು ಬಿಜೆಪಿ ಸೆರ್ಪಡೆ), ಸಚಿವ ಶಿವಾನಂದ ಪಾಟೀಲ್ ಸಂಬಂಧಿ ಹರ್ಷಗೌಡ ಪಾಟೀಲ್, ಹಳಿಯಾಳದ ಶ್ರೀನಿವಾಸ್ ಹಾಗೂ ಹಳಿಯಾಳದ ತುಕಾರಾಂ ಗೌಡ ಪಾಟೀಲ್ ಬಿಜೆಪಿಗೆ ಸೇರಿದ್ದಾರೆ.

ಸುಮಲತಾ ಅವರು ಪಕ್ಷ ಸೇರ್ಪಡೆಗೂ ಮುನ್ನ ಕಂಠೀರವ ಸ್ಡುಡಿಯೋದ ಆವರಣದಲ್ಲಿರುವ ಅಂಬರೀಶ್ ಅವರ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ಸುಮಲತಾ ಅವರು ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಘೋಷಿಸಿದ್ದಾರೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ಕಾರ್ಯಕ್ರಮದಲ್ಲಿ ಬಿ.ಎಸ್‌ ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಆರ್‌ ಅಶೋಕ್, ಡಿ.ವಿ ಸದಾನಂದ ಗೌಡ, ಸಿ.ಟಿ ರವಿ, ಕೆ.ಸಿ ನಾರಾಯಣ ಗೌಡ, ಮುನಿರತ್ನ ಹಾಗೂ ಮಂಡ್ಯ ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Copyright © All rights reserved Newsnap | Newsever by AF themes.
error: Content is protected !!