ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಹೆಲಿಕಾಪ್ಟರ್ ಮೂಲಕ ಕೂಡ್ಲಿಗಿಗೆ ಆಗಮಿಸಿದ ಸಿದ್ದರಾಮಯ್ಯ ಕಾರು ಹತ್ತುವ ವೇಳೆ ಕುಸಿದು ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೆಲಿಪ್ಯಾಡ್ ನಲ್ಲಿ ನಡೆದಿದೆ.
ಚುನಾವಣೆ ಪ್ರಚಾರಕ್ಕೆ ತೆರಳಿರುವ ಸಿದ್ದರಾಮಯ್ಯ ಕೂಡ್ಲಿಗಿ ಹೆಲಿಪ್ಯಾಡ್ ನಲ್ಲಿ ಕಾರು ಹತ್ತುವ ವೇಳೆ ಕಾರಿನ ಬಾಗಿಲ ಬಳಿಯೇ ಕುಸಿದು ಬಿದ್ದಿದ್ದಾರೆ.
ಕುಡ್ಲಿಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ ಶ್ರೀನಿವಾಸ್ ಪರವಾಗಿ ಸಿದ್ದರಾಮಯ್ಯ ಪ್ರಚಾರಕ್ಕೆ ಆಗಮಿಸಿದ್ದರು. ಹೆಲಿಕಾಪ್ಟರ್ ಮೂಲಕ ಆಗಮಿಸಿದ್ದ ಅವರು, ಬಳಿಕ ಮೊಬೈಲ್‌ನಲ್ಲಿ ಬ್ಯೂಸಿಯಾಗಿದ್ದರು. ಕೆಲ ಕ್ಷಣಗಳಲ್ಲೇ ಕಾರು ಹತ್ತುತ್ತಿದ್ದಂತೆ ಕಾರಿನ ಬಾಗಿಲ ಬಳಿ ಕುಸಿದಿದ್ದಾರೆ ಬೆಂಗಳೂರಿನಲ್ಲಿ ಕೈಗಾರಿಕಾ ಸಂಘದ ಅಧ್ಯಕ್ಷರ ಮನೆ ಮೇಲೆ ಐಟಿ ದಾಳಿ

ಕೂಡಲೇ ಗನ್ ಮ್ಯಾನ್ ಅವರನ್ನು ಹಿಡಿದುಕೊಂಡಿದ್ದಾರೆ. ಈ ವೇಳೆ ವೈದ್ಯರು ಗ್ಲೂಕೋಸ್ ನೀಡಿದ್ದಾರೆ. ಬಳಿಕ ಸುಧಾರಿಸಿಕೊಂಡ ಸಿದ್ದರಾಮಯ್ಯ ಜನರತ್ತ ಕೈ ಬೀಸಿ ಕಾರು ಹತ್ತಿ ಕೂಡ್ಲಿಗಿ ಕಾಂಗ್ರೆಸ್ ಅಭ್ಯರ್ಥಿ ಡಾ.ಎನ್.ಟಿ. ಶ್ರೀನಿವಾಸ್ ಮನೆಗೆ ತೆರಳಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ