ಸುಮಾರು ಎರಡು ದಶಕಗಳಿಂದ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರೆ ಎಂಬ ಊಹಾಪೋಹ ಇತ್ತು. ಇದೀಗ ರಜನೀಕಾಂತ್ ರಾಜಕೀಯ ಆಗಮನದ ಕನಸಿಗೆ ಗುಡ್ ಬೈ ಹೇಳಿ ಶಾಕಿಂಗ್ ನಿರ್ಧಾರ ಪ್ರಕಟಿಸಿದ್ದಾರೆ.
ತಮಿಳುನಾಡು ರಾಜಕೀಯಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟಿದ್ದ ಸೂಪರ್ ಸ್ಟಾರ್ ರಜನಿಕಾಂತ್, ತಮ್ಮ ಮಕ್ಕಳ ಮಂಡ್ರ್ ಪಕ್ಷದ ಜೊತೆ ಸಕ್ರಿಯ ರಾಜಕಾರಣ ಅಂಗಳಕ್ಕೆ ಧುಮುಕುವ ಭರವಸೆ ನೀಡಿದ್ದರು. ಆದರೆ ಇನ್ನೇನು ಕೆಲ ತಿಂಗಳಿನಲ್ಲೇ ತಮಿಳುನಾಡಿನ ವಿಧಾನಸಭಾ ಚುನಾವಣೆ ನಡೆಯಲಿರುವ ವೇಳೆಯಲ್ಲಿ ತಮ್ಮ ನಿಲುವು ಬದಲಾಯಿಸಿದ್ದಾರೆ.
ಮೂಲಗಳ ಮಾಹಿತಿ ಪ್ರಕಾರ ಸೂಪರ್ ಸ್ಟಾರ್ ರಜನಿಕಾಂತ್ ಕೂಡ ಈ ನಿರ್ಧಾರವನ್ನು ಅನಿವಾರ್ಯವಾಗಿ ಕೈಗೊಂಡಿದ್ದಾರಂತೆ. ಕೆಲ ತಿಂಗಳಿನಿಂದ ರಜನಿಕಾಂತ್ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ವೈದ್ಯರು ಯಾವುದೇ ರೀತಿಯ ಸೋಂಕಿಗೆ ಒಳಗಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಸೂಚಿಸಿದ್ದಾರೆ.
ಕೊರೊನಾದ ಈ ಸಂದರ್ಭದಲ್ಲಿ ಸಕ್ರಿಯ ರಾಜಕಾರಣದಿಂದ ಹೊರಗಡೆ ಓಡಬೇಕಾದ ಸ್ಥಿತಿ ಎದುರಾಗಲಿದೆ. ಇದರಿಂದ ಆರೋಗ್ಯ ಹದಗೆಡುವ ಸಾಧ್ಯತೆ ಇರುತ್ತದೆ.ಹೀಗಾಗಿ ರಜನಿಕಾಂತ್ ತಮ್ಮ ರಾಜಕೀಯದ ಕನಸಿಗೆ ತಿಲಾಂಜಲಿ ಇಟ್ಟಿದ್ದಾರೆ. ಇದರಿಂದ ಅವರ ಅಭಿಮಾನಿಗಳಿಗೆ ತೀವ್ರ ನಿರಾಸೆ ಉಂಟಾಗಿದೆ.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ