- ನಾಳೆ ಬೆಳಗ್ಗೆ ಡಿ.ಕೆ. ಶಿವಕುಮಾರ್ ಸಿಎಂ ಆದರೆ ಜೆಡಿಎಸ್ ಬೆಂಬಲ!
- ನಮ್ಮ ಎಂಎಲ್‌ಎಗಳಿಗೆ ದಿನ ಬೆಳಗಾದ್ರೆ ಪಕ್ಷಕ್ಕೆ ಬನ್ನಿ ಅಂತಿದ್ದಾರೆ
- ನನಗೇನೂ ವೈರತ್ವ ಇಲ್ಲ ಬೆಂಬಲ ಕೊಡುತ್ತೇವೆ ಎಂದ ಹೆಚ್‌ಡಿಕೆ
ಬೆೆಂಗಳೂರು:
ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಕುರ್ಚಿಯ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವ ಸಚಿವರು, ಶಾಸಕರಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದಾದರೆ ಜೆಡಿಎಸ್ ನ 19 ಶಾಸಕರ ಬೇಷರತ್ತ ಬೆಂಬಲ ನೀಡುವುದಾಗಿ ರಾಜ್ಯಾಧ್ಯಕ್ಷ ಹೆಚ್.ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ ನಾಳೆ ಬೆಳಗ್ಗೆಯೇ ಡಿ.ಕೆ. ಶಿವಕುಮಾರ್ ಸಿಎಂ ಆದರೆ ಜೆಡಿಎಸ್ ನ 19 ಶಾಸಕರೂ ಬೆಂಬಲ ಕೊಡುತ್ತೇವೆ. ಡಿಕೆ ಶಿವಕುಮಾರ್ ಅವರು ಬೇಕಿದ್ರೆ ಸಿಎಂ ಆಗಲಿ. ನಾವೂ ಸಹ ಅವರಿಗೆ ಬೆಂಬಲವನ್ನು ಕೊಡುತ್ತೇವೆ ಎಂದು ಘೋಷಣೆ ಮಾಡಿದರು.
ಸುದ್ದಿಗಾರರೊಂದಿಗೆ ಸಾಕಷ್ಟು ವ್ಯಂಗ್ಯವಾಗೇ ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ ಅವರು ನಾನ್ಯಾಕೆ ಅವರಿಗೆ ಅಡ್ಡಿಯಾಗಲಿ. ನಮ್ಮ ಎಂಎಲ್‌ಎಗಳಿಗೆ ದಿನ ಬೆಳಗಾದ್ರೆ ಪಕ್ಷಕ್ಕೆ ಬನ್ನಿ ಅಂತ ಅರ್ಜಿ ಹಾಕಿ ಕರೆಯುತ್ತಿದ್ದಾರೆ. ಯಾಕೆ ಸುಮ್ನೆ ಜೆಡಿಎಸ್ ನಾಯಕರನ್ನು ಕಾಂಗ್ರೆಸ್ ಪಕ್ಷಕ್ಕೆ ಬರಲು ಕರೆಯುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದರು.
ನನಗೇನೂ ವೈರತ್ವ ಇಲ್ಲ ನಾವೇ ಡಿ.ಕೆ ಶಿವಕುಮಾರ್ ಅವರಿಗೆ ಬೆಂಬಲ ಕೊಡುತ್ತೇವೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗಲಿ ನೋಡೋಣ ಎಂದು ಸವಾಲು ಹಾಕಿದ್ದಾರೆ.
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
More Stories
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ