ಮಂಡ್ಯದಲ್ಲಿ ಮಂಗಳವಾರ ಸಂಸದರ ಆಪ್ತರು ಹಾಗೂ ಬೆಂಬಲಿಗರ ಸಭೆ ನಡೆಸಿ, ರಾಜಕಾರಣಕ್ಕೆ ರೇಬಲ್ ಲೇಡಿ ಎಂಟ್ರಿ ಕೊಡಬೇಕೆ ಯಾವ ಪಕ್ಷಕ್ಕೆ ಸೇರಬೇಕು ಎನ್ನುವ ಆಯ್ಕೆ ಮಾಡಬೇಕು ಅಂತ ಅಭಿಪ್ರಾಯ ಹೇಳಿಕೊಂಡಿದ್ದಾರೆ.ಚುನಾವಣೆ ಸಿದ್ದತೆ : 76 ಮಂದಿ ತಹಶೀಲ್ದಾರ್ ವರ್ಗಾವಣೆ
ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ವಾಭಿಮಾನದ ಕಹಳೆ ಮೊಳಗಿಸಿ ಗೆದ್ದು ಬೀಗಿದ್ದ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯದ ಬಗ್ಗೆ ಎಚ್ಚರಿಕೆ ಹೆಜ್ಜೆ ಇಟ್ಟು ಮೂರು ಮುಕ್ಕಾಲು ವರ್ಷದಿಂದಲೂ ಪಕ್ಷದ ಆಯ್ಕೆ ಬಗ್ಗೆ ನಿಗೂಢತೆ ಕಾಯ್ದುಕೊಂಡಿದ್ದ ರೆಬೆಲ್ ಲೇಡಿ, ರಾಜಕೀಯ ನಿರ್ಧಾರದ ಬಗ್ಗೆ ಪ್ರಶ್ನೆ ಎದುರಾದರೆ ಜನರ ಅಭಿಪ್ರಾಯಕ್ಕೆ ಬಿಟ್ಟಿದ್ದು ಅಂತ ಹೇಳುವ ಮೂಲಕ ಕುತೂಹಲ ಹೆಚ್ಚಿಸಿಕೊಂಡೇ ಬಂದಿದ್ದರು.
ಆಪ್ತರು ಹಾಗೂ ಬೆಂಬಲಿಗರು ಸಭೆ ನಡೆಸಿ 3 ಮಹತ್ವದ ನಿರ್ಣಯ ಕೈಗೊಂಡಿದ್ದಾರೆ.
ಮಂಡ್ಯದ ಕರ್ನಾಟಕ ಸಂಘದ ಸಭಾಂಗಣದಲ್ಲಿ ಹನಕೆರೆ ಶಶಿ, ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಮಾರು 25 ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ಮುಖಂಡರು ಭಾಗಿಯಾದ್ದರು , ನೂರಕ್ಕೂ ಹೆಚ್ಚು ಮಹಿಳೆಯರೂ ಪಾಲ್ಗೊಂಡಿದ್ದರು.
ತಮ್ಮ ನಾಯಕಿ ರಾಜ್ಯ ರಾಜಕೀಯಕ್ಕೆ ಬರಬೇಕೆಂಬುದು ಅಭಿಪ್ರಾಯವಾಗಿತ್ತು .
ಒಟ್ಟಾರೆ ಇಂದಿನ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳು, ಅಂತಿಮವಾಗಿ ಕೈಗೊಂಡ ನಿರ್ಣಯಗಳನ್ನು ತಮ್ಮ ನಾಯಕಿಯ ಮುಂದಿಡಲಿದ್ದಾರೆ. ಇದುವರೆಗೂ ಜಾಣ್ಮೆಯಿಂದ ಹೆಜ್ಜೆ ಇಡುತ್ತಾ ಬಂದಿದ್ದ ಸುಮಲತಾ ಅಂಬರೀಶ್ ರಾಜ್ಯ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರಾ? ಯಾವ ಪಕ್ಷ ಆಯ್ಕೆ ಮಾಡಿಕೊಳ್ಳುತ್ತಾರೆ ಎಂಬುದನ್ನ ಕಾದುನೋಡಬೇಕಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು