ಹೈಕೋರ್ಟ್​ ಆದೇಶಕ್ಕೆ ‘ಸುಪ್ರೀಂ’ ತಡೆ.. ಡಿಕೆಶಿಗೆ ಮತ್ತೆ ‘ಐಟಿ’ ಸಂಕಷ್ಟ ಶುರು

Team Newsnap
1 Min Read

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಹೈಕೋರ್ಟ್​ ರದ್ದು ಮಾಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ.

ನ್ಯಾ. ಸಂಜೀವ್ ಖನ್ನಾ ನೇತೃತ್ವದ ದ್ವಿಸದಸ್ಯ ತಡೆ ನೀಡಿದ ಬೆನ್ನಲ್ಲೇ ಡಿ.ಕೆ.ಶಿವಕುಮಾರ್​ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 2018ರಲ್ಲಿ ಬಿಡದಿಯ ಈಗಲ್ ಟನ್ ರೆಸಾರ್ಟ್​ನಲ್ಲಿ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಡಿ.ಕೆ ಶಿವಕುಮಾರ್ ಇದ್ದ ಕೋಣೆಯಲ್ಲಿ ಹಣಕಾಸು ವರ್ಗಾವಣೆಗೆ ಸಂಬಂಧಿಸಿದ ದಾಖಲೆಗಳು ಸಿಕ್ಕಿದ್ದವು ಎನ್ನಲಾಗಿತ್ತು.

ಈ ಪ್ರಕರಣದ ತನಿಖೆಯನ್ನು ಐಟಿ ಅಧಿಕಾರಿಗಳು ನಡೆಸುತ್ತಿದ್ದರು. ಆದರೆ ಡಿಕೆ ಶಿವಕುಮಾರ್ ಹೈಕೋರ್ಟ್​ ಮೆಟ್ಟಿಲೇರಿ ಐಟಿ ವಿಚಾರಣೆಗೆ ತಡೆ ತಂದಿದ್ದರು. ಆರೋಪಿಯಿಂದ ಬರೀ ಹಣಕಾಸು ವ್ಯವಹಾರಗಳು ನಡೆದಿದ್ದರೆ ಮೊಕದ್ದಮೆ ದಾಖಲಿಸಲು ಸಾಧ್ಯವಿಲ್ಲ. ಲೆಕ್ಕವಿಲ್ಲದ ವಹಿವಾಟುಗಳು ನಡೆದಿದ್ದರೂ ತೆರಿಗೆ ಅಥವಾ ದಂಡದ ಪಾವತಿಗೆ ಹೊಣೆಗಾರರಾಗಿದ್ದಾರೆ ಎಂದು ನಿರ್ಧರಿಸುವವರೆಗೆ ಯಾವುದೇ ಕಾನೂನು ಕ್ರಮವನ್ನು ಪ್ರಾರಂಭಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದ ಹೈಕೋರ್ಟ್​, ಪ್ರಕರಣವನ್ನ ವಜಾ ಮಾಡಿತ್ತು. ಹೈಕೋರ್ಟ್​ ವಜಾ ಮಾಡಿದ ಬೆನ್ನಲ್ಲೇ ಡಿ.ಕೆ.ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಿತ್ತು. ಇದನ್ನು ಓದಿ – ಎಫ್ ಡಿ ಎ ಪರೀಕ್ಷಾ ಅಕ್ರಮ: ಮೈಸೂರು ಪಿಎಸ್ ಐ ಅಶ್ವಿನಿ ಅಮಾನತ್ತು

ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟ್ ಐಟಿ ಅಧಿಕಾರಿಗಳು ಅರ್ಜಿ ಹಾಕಿದ್ದರು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್​ ಪೀಠ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ.

Share This Article
Leave a comment