ರಾಜ್ಯದಲ್ಲಿ ಮುಸ್ಲಿಮರ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂ ತಡೆ: ಸರ್ಕಾರಕ್ಕೆ ಮುಖ ಭಂಗ

Team Newsnap
1 Min Read

ರಾಜ್ಯದಲ್ಲಿ ಮುಸ್ಲಿಮರಿಗೆ ಶೇ 4 ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.. ಈ ಆದೇಶದಿಂದ ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.

ಮುಸ್ಲಿಮರಿಗೆ ಶೇ4 ರಷ್ಟು ಒಬಿಸಿ ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮೇ 9 ಕ್ಕೆ ಮುಂದೂಡಿದೆ.

ಈ ಆದೇಶದ ಆಧಾರದ ಮೇಲೆ ಮೇ 9 ರವರೆಗೆ ಯಾವುದೇ ಪ್ರವೇಶ ಅಥವಾ ನೇಮಕಾತಿ ನಡೆಯುವುದಿಲ್ಲ ಎಂದು ಕರ್ನಾಟಕ ಸರ್ಕಾರ ಮತ್ತೊಮ್ಮೆ ಭರವಸೆ ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಕೆ.ಎಂ ಜೋಸೇಪ್ ನೇತೃತ್ವದ ಪೀಠ ಆದೇಶ ನೀಡಿದೆ. ಮುಸ್ಲಿಮರ 2 ಬಿ ಮೀಸಲಾತಿಯನ್ನು ರದ್ದುಗೊಳಿಸಿದ್ದ ರಾಜ್ಯ ಬಿಜೆಪಿ ಸರ್ಕಾರ ಸಮುದಾಯವನ್ನು ಆರ್ಥಿಕ ಹಿಂದುಳಿದ ವರ್ಗಗಳಿಗೆ ಸೇರಿಸಿತ್ತು.

ಮುಸ್ಲಿಂಮರಿಂದ ತೆಗೆದುಕೊಂಡ ಮೀಸಲಾತಿಯನ್ನು ರಾಜ್ಯದ ಪ್ರಬಲ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳಿಗೆ ಸಮಾನವಾಗಿ ಹಂಚಿತ್ತು.

ಸುಪ್ರೀಂ ಕೋರ್ಟ್ ಆದೇಶದಿಂದಾಗಿ ಲಿಂಗಾಯತ, ಒಕ್ಕಲಿಗ ಮೀಸಲಾತಿ ಹೆಚ್ಚಳದ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ.ಇದನ್ನು ಓದಿ –ಮಂಡ್ಯ ಸಮೀಪ ಕಾಲುವೆಯಲ್ಲಿ ಈಜಲು ಹೋಗಿ ಬೆಂಗಳೂರಿನ ಐವರು ಜಲ ಸಮಾಧಿ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಈ ಸಮುದಾಯಗಳ ಮತಗಳನ್ನು ಸೆಳೆಯಲು ಬಿಜೆಪಿ ಸರ್ಕಾರ ಮುಸ್ಲಿಮರ ಮೀಸಲಾತಿಗೆ ಕೈ ಹಾಕಿತ್ತು. ಆದರೆ, ಅದಕ್ಕೆ ಸುಪ್ರೀಂ ಕೋರ್ಟ್ ಭಾರೀ ಶಾಕ್ ನೀಡಿದೆ.

Share This Article
Leave a comment