ಕರ್ನಾಟಕ ಮೂಲದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ (63) ಹೃದಯಾಘಾತದಿಂದ ನಿಧನರಾದರು.
ನ್ಯಾ. ಶಾಂತನಗೌಡರ್ ಅವರು ಹಲವು ದಿನಗಳಿಂದ ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದರು. ನಿನ್ನೆ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ದಿಢೀರನೆ ಸಾಯಂಕಾಲ ಏಳೂವರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ದೆಹಲಿ ಸಮೀಪದ ಗುರುಗಾಂವ್ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಶಾಂತನಗೌಡರ್ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಸುಪ್ರೀಂಕೋರ್ಟ್ನ ಅಸಿಸ್ಟೆಂಟ್ ರೆಸಿಸ್ಟ್ರಾರ್ ಗಗನ್ ಸೋನಿ ಅಧಿಕೃತ ಮಾಹಿತಿ ನೀಡಿದ್ದಾರೆ.
ಶಾಂತನಗೌಡರ್ ಮೂಲತಃ ಹಾವೇರಿ ಜಿಲ್ಲೆಯ ಹಿರೇಕೆರೂರ್ ತಾಲೂಕಿನ ಚಿಕ್ಕೇರೂರಿನವರು. ಅವರು ಆರಂಭದಲ್ಲಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಕೀಲರಾಗಿದ್ದರು. ನಂತರ 2003ರಲ್ಲಿ ಹೆಚ್ಚುವರಿ ನ್ಯಾಯಾಧೀಶರನ್ನಾಗಿ ನೇಮಿಸಲಾಗಿತ್ತು. ಸೆಪ್ಟೆಂಬರ್ 29, 2004ರಲ್ಲಿ ಕರ್ನಾಟಕ ಹೈಕೋರ್ಟ್‌ನ ಖಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 22 ಸೆಪ್ಟೆಂಬರ್ 2016ರಲ್ಲಿ ಕೇರಳ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿದ್ದರು. ಬಳಿಕ 2017ರಲ್ಲಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ