ನವದೆಹಲಿ : ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿ ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಷರತ್ತು ವಿಧಿಸಿ ಮಧ್ಯಂತರ ತಡೆ ನೀಡಿದೆ. ಇದರಿಂದ ಪ್ರಜ್ವಲ್ ರೇವಣ್ಣಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಅಕ್ರಮ ನಡೆಸಿ ಲೋಕಸಭೆಗೆ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಸುಪ್ರೀಂ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಸಿಜೆಐ ಡಿ.ವೈ.ಚಂದ್ರಚೂಡ್ ಅವರಿದ್ದ ಪೀಠವು, ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
ಸಂಸತ್ ಕಲಾಪಕ್ಕೆ ಹಾಜರಾಗಲು ಅವಕಾಶ ನೀಡಿದೆ. ಆದರೆ ಸಂಸತ್‌ನಿಂದ ಬರುವ ಭತ್ಯೆ ತೆಗೆದುಕೊಳ್ಳುವಂತಿಲ್ಲ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.ಗೌರಿಹಬ್ಬ : ಸುಮಂಗಲೆಯರಿಗೆ ಸಕಲ ಸೌಭಾಗ್ಯ ನೀಡುವ ಹಬ್ಬ
ಮಧ್ಯಂತರ ತಡೆಯಿಂದ ಪ್ರಜ್ವಲ್ ರೇವಣ್ಣಗೆ ಚುನಾವಣಾ ಸ್ಪರ್ಧೆ ದಾರಿ ಸುಗಮವಾದಂತಾಗಿದೆ. ಹೆಚ್.ಡಿ.ರೇವಣ್ಣ ಪ್ರಕರಣವನ್ನು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಸುಪ್ರೀಂ ಸೂಚನೆ ನೀಡಿದೆ.
More Stories
ಸಿದ್ದರಾಮಯ್ಯ ಹೆಸರನ್ನು ರಸ್ತೆಗೆ ಇಟ್ಟರೆ ತಪ್ಪೇನು? – ಸಿಎಂ ಪರ ನಿಂತುಕೊಂಡ ಪ್ರತಾಪ್ ಸಿಂಹ
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದ ಏರ್ಸ್ಟ್ರೈಕ್: 15 ಮಂದಿ ಮೃತ್ಯು
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ !