ರೂಪಾ ವಿರುದ್ದದ ಕ್ರಿಮಿನಲ್ ಮಾನನಷ್ಠ ಕೇಸ್ ಗೆ ಸುಪ್ರೀಂ ತಡೆ

Team Newsnap
1 Min Read

ನವದೆಹಲಿ : ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೂಡಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಮಾಡಿದ್ದ, ವಿವಾದಾಸ್ಪದ ಪೋಸ್ಟ್‌ಗಳನ್ನು ತೆಗೆಯಲು ನೀಡಿದ್ದ ಆದೇಶಕ್ಕೆ ಅನುಗುಣವಾಗಿ ರೂಪಾ ಅವರು ಪ್ರಮಾಣಪತ್ರ ಸಲ್ಲಿಸಿದ ನಂತರ, ಸುಪ್ರೀಂ ಕೋರ್ಟ್‌ ಈ ಆದೇಶ ನೀಡಿದೆ.

ಮಾಧ್ಯಮಗಳೆದುರು ಮಾತನಾಡದಂತೆ ಕರ್ನಾಟಕದ ಈ ಇಬ್ಬರು ಹಿರಿಯ ನಾಗರಿಕ ಸೇವಾ ಅಧಿಕಾರಿಗಳಿಗೆ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಪಂಕಜ್ ಮಿತ್ತಲ್‌ ಅವರನ್ನೊಳಗೊಂಡ ಪೀಠ ನಿರ್ದೇಶನ ನೀಡಿತು.

IAS , war , IPS

ಇಬ್ಬರ ನಡುವಿನ ಎಲ್ಲಾ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ನಾವು ಪ್ರಯತ್ನ ನಡೆಸುತ್ತಿರುವ ಕಾರಣ, ಇಬ್ಬರಲ್ಲಿ ಯಾರು ಕೂಡ ಸಾಮಾಜಿಕ ಮತ್ತು ಮುದ್ರಣ ಮಾಧ್ಯಮಗಳಿಗೆ ಸಂದರ್ಶನ ಅಥವಾ ಇನ್ನಾವುದೇ ಮಾಹಿತಿಯನ್ನು ಯಾವುದೇ ರೂಪದಲ್ಲಿ ನೀಡಬಾರದು” ಎಂದು ನ್ಯಾಯಪೀಠ ಆದೇಶಿಸಿತು.

ವಿಚಾರಣೆ ವೇಳೆ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿಲ್ಲದ ಹೇಳಿಕೆಗಳು ಸೇರಿದಂತೆ ಅಧಿಕಾರಿಯ ವಿರುದ್ಧದ ತನ್ನ ಎಲ್ಲಾ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ತೆಗೆದುಹಾಕಿರುವುದಾಗಿ ರೂಪಾ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದರು.ಕೋವಿಡ್ ಹೆಚ್ಚಳ :60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ

ಈ ದಾಖಲೆಯಲ್ಲಿ ಪರಿಗಣಿಸಿದ ಸರ್ವೋಚ್ಚ ನ್ಯಾಯಾಲಯವು, ಮಧ್ಯಂತರ ಕ್ರಮವಾಗಿ ಮಾನನಷ್ಟ ಮೊಕದ್ದಮೆಗೆ ತಡೆಯಾಜ್ಞೆ ನೀಡಿತು. ಇದೇ ವೇಳೆ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 12ಕ್ಕೆ ಮುಂದೂಡಿತು .

Share This Article
Leave a comment