ಪ್ರಜ್ವಲ್ ರೇವಣ್ಣ ವಿರುದ್ದ ಐಟಿ ತನಿಖೆಗೆ ಸುಪ್ರೀಂಕೋರ್ಟ್ ಹಸಿರು ನಿಶಾನೆ

Team Newsnap
1 Min Read

ಚುನಾವಣಾ ಆಯೋಗಕ್ಕೆ ತಪ್ಪು ದಾಖಲೆ ನೀಡಿರುವ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ.

ಆದಾಯ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳು ತನಿಖೆ ನಡೆಸಲು ಸುಪ್ರೀಂ ಕೋರ್ಟ್​ ಒಪ್ಪಿಗೆ ಸೂಚಿಸಿದೆ

ಪ್ರಜ್ವಲ್ ತಮ್ಮ ಹದಿನೈದನೇ ವಯಸ್ಸಿನಲ್ಲಿ 23 ಕೋಟಿ ರೂಪಾಯಿ ಆಸ್ತಿ ಹೊಂದಿದ್ದರು ಎಂಬ ಆರೋಪ ಇದೆ.

ಈ ಆಸ್ತಿ ವಿವರದ ಬಗ್ಗೆ ಆದಾಯ ತೆರಿಗೆ ಇಲಾಖೆಗೆ ಸಂಸದರು ಮಾಹಿತಿ ಸಲ್ಲಿಕೆ ಮಾಡಿಲ್ಲ. ಚುನಾವಣೆ ಆಯೋಗಕ್ಕೂ ತಪ್ಪು ಮಾಹಿತಿ ನೀಡಿದ್ದಾರೆ

ಈ ಆರೋಪ ಪ್ರಕರಣ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದೆ ನ್ಯಾಯಮೂರ್ತಿ ಸಂಜಯ್ ಕಿಷನ್ ಕೌಲ್ ಹಾಗು ನ್ಯಾಯಮೂರ್ತಿ ಸುಂದರೇಶ್ ನೇತೃತ್ವದ ಪೀಠ ಇದರ ವಿಚಾರಣೆ ನಡೆಸಿತು.

ವಿಚಾರಣೆ ಬಳಿಕ ಐಟಿ ಇಲಾಖೆ ತನಿಖೆ ನಡೆಸಲು ಹಸಿರು ನಿಶಾನೆ ನೀಡಿದೆ.

Share This Article
Leave a comment