Trending

ಮಂಡ್ಯ ಪ್ರಕರಣಕ್ಕೆ ಸುಪ್ರೀಂ ತೀರ್ಪು: ವಿಚ್ಛೇದಿತ ಪುತ್ರಿಗೆ ಅನುಕಂಪದ ಕೆಲಸ ನೀಡುವಂತಿಲ್ಲ

ಸರ್ಕಾರಿ ನೌಕರರು ಮರಣ ಹೊಂದಿದ ಬಳಿಕ ಅವರ ಪುತ್ರಿ ವಿವಾಹ ವಿಚ್ಛೇದನ ಪಡೆದರೆ ಅಂತಹವರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ಉದ್ಯೋಗ ನೀಡಲಾಗುವುದಿಲ್ಲ.

ಮಂಡ್ಯ ಪ್ರಕರಣವೊಂದರ ಅರ್ಜಿಯನ್ನು ಇತ್ಯರ್ಥ ಮಾಡಿರುವ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.

ಮಂಡ್ಯ ಜಿಲ್ಲಾ ಖಜಾನೆಯಲ್ಲಿ ದ್ವಿತೀಯ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ದಿ. ಪಿ. ಭಾಗ್ಯಮ್ಮ ಪುತ್ರಿ ವಿ. ಸೌಮ್ಯಶ್ರೀ ಅವರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡುವಂತೆ ಕರ್ನಾಟಕ ಹೈಕೋರ್ಟ್ ನಿರ್ದೇಶನ ನೀಡಿತ್ತು.

ಈ ಆದೇಶ ಪ್ರಶ್ನೆ ಮಾಡಿ ರಾಜ್ಯ ಸರ್ಕಾರದ ಖಜಾನೆ ನಿರ್ದೇಶಕರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು.‌

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಆರ್.ಶಾ ಮತ್ತು ಅನಿರುದ್ಧ ಬೋಸ್ ಅವರ ಪೀಠವು ಸೌಮ್ಯಶ್ರೀ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಲು ಅರ್ಹರಲ್ಲ ಎಂದು ಹೇಳಿದೆ.

‘ಕರ್ನಾಟಕ ನಾಗರಿಕ ಸೇವಾ (ಸಹಾನುಭೂತಿ ಆಧಾರದ ನೇಮಕಾತಿ) ನಿಯಮಗಳು – 1996’ ಪ್ರಕಾರ, ಸರ್ಕಾರಿ ಉದ್ಯೋಗಿಯ ವಿಚ್ಛೇದಿತ ಪುತ್ರಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಅವಕಾಶವಿಲ್ಲ. ಉದ್ಯೋಗಿಯನ್ನೇ ಅವಲಂಬಿಸಿದ್ದ ಮದುವೆಯಾಗದ ಅಥವಾ ವಿಧವೆ ಪುತ್ರಿಗೆ ಮಾತ್ರ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಬಹುದಾಗಿದೆ ಎಂದು ಪೀಠ ಹೇಳಿದೆ.

ಅನುಕಂಪದ ಆಧಾರದ ನೇಮಕಾತಿ ನಿಯಮಗಳಿಗೆ 2021ರಲ್ಲಿ ತಿದ್ದುಪಡಿ ಮಾಡಲಾಗಿದ್ದು, ‘ವಿಚ್ಛೇದಿತ ಪುತ್ರಿ’ಯನ್ನೂ ಸೇರ್ಪಡೆಗೊಳಿಸಲಾಗಿದೆ. ಆದರೆ, ಉದ್ಯೋಗಿ ಮರಣ ಹೊಂದಿದ ನಂತರ ವಿಚ್ಛೇದನ ಪಡೆದ ಸಂದರ್ಭದಲ್ಲಿ ಇದನ್ನು ಪರಿಗಣಿಸಲಾಗದು ಎಂದು ಕೋರ್ಟ್ ಹೇಳಿದೆ.

ಸೌಮ್ಯಶ್ರೀ ಅವರ ವಿವಾಹ ಸಿಂಧುವಾಗಿದ್ದಾಗಲೇ 2012ರ ಮಾರ್ಚ್ 25ರಂದು ಪಿ. ಭಾಗ್ಯಮ್ಮ ಮೃತಪಟ್ಟಿದ್ದರು. 2012ರ ಸೆಪ್ಟೆಂಬರ್ 12ರಂದು ಸೌಮ್ಯಶ್ರೀ ಸಮ್ಮತಿಯೊಂದಿಗೆ ವಿಚ್ಛೇದನ ಪಡೆದಿದ್ದರು. ಅವರ ವಿಚ್ಛೇದನವನ್ನು 2013ರ ಮಾರ್ಚ್ 20ರಂದು ಮಂಡ್ಯದ ನ್ಯಾಯಾಲಯವು ಊರ್ಜಿತಗೊಳಿಸಿತ್ತು.


2013ರ ಮಾರ್ಚ್ 21ರಂದು ಸೌಮ್ಯಶ್ರೀ ಅನುಕಂಪದ ಆಧಾರದ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ್ದರು.ಈಗ ಈ ತೀರ್ಪಿನಿಂದ ಸೌಮ್ಯ ಶ್ರೀ ಕೆಲಸ ಕಳೆದುಕೊಳ್ಳುವ ಅನಿವಾರ್ಯತೆ ಬಂದಿದೆ.‌

Team Newsnap
Leave a Comment
Share
Published by
Team Newsnap

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024