ಕೃಷಿ ಮಸೂದೆ ಸಮಸ್ಯೆ ಪರಿಹಾರಕ್ಕೆ ಸಮಿತಿ ರಚನೆಗೆ ಸುಪ್ರೀಂ ನಿರ್ಧಾರ

Team Newsnap
1 Min Read
NEET-PG 2021 - Counseling for 1,456 seats only: Supreme
  • 3 ಕೃಷಿ ಮಸೂದೆಗಳಿಗೆ ಸುಪ್ರೀಂ ಕೋರ್ಟ್ ‌ತಡೆ
  • ವಿವಾದಿತ ಕೃಷಿ ಕಾಯ್ದೆ ಜಾರಿ ಸಧ್ಯಕ್ಕೆ ‌ಇಲ್ಲ
  • 48 ರೈತರ ಹೋರಾಟಕ್ಕೆ ಕೊನೆಗೂ ಜಯ
  • ನಾಲ್ವರ ತಜ್ಞರ ಸಮಿತಿ ರಚನೆ ಕೃಷಿ ತಜ್ಞ ಅಶೋಕ್‌ ಗುಲಾಟಿ, ಪ್ರಮೋದ್ ಜೋಷಿ ,

ಕೃಷಿ ಮಸೂದೆ ಕುರಿತ ಸಮಸ್ಯೆಗಳನ್ನು ಬಗೆಹರಿಸಲೇಬೇಕಿದ್ದು ನಾವು ಸಮಿತಿಯನ್ನು ರಚನೆ ಮಾಡುತ್ತಿದ್ದೇವೆ. ಪ್ರತಿಭಟನೆ ನಡೆಸುವುದು, ಬಿಡುವುದು ನಿಮಗೆ ಬಿಟ್ಟಿದ್ದು ಎಂದು ರೈತರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ಸೂಚಿಸಿದೆ.

ವಿವಾದಿತ ಕೃಷಿ ಮಸೂದೆ ಕುರಿತು ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳ ಕುರಿತು ವಿಚಾರಣೆ ನಡೆಸಿರುವ ಸರ್ವೋಚ್ಛ ನ್ಯಾಯಾಲಯವು, ಯಾವುದೇ ಶಕ್ತಿಗೂ ನಮ್ಮನ್ನು ತಡೆಯಲು ಸಾಧ್ಯವಿಲ್ಲ. ಈಗಿರುವ ಸಮಸ್ಯೆಯನ್ನು ನಾವು ಇತ್ಯರ್ಥಪಡಿಸಲೇಬೇಕಾಗಿದೆ. ಅದ್ದರಿಂದ ನಾವು ಸಮಿತಿಯೊಂದನ್ನು ರಚನೆ ಮಾಡುತ್ತಿದ್ದೇವೆ. ಸಮಿತಿಯಲ್ಲಿ ಕಾಯ್ದೆ ಕುರಿತ ಸಾಧಕ ಹಾಗೂ ಬಾಧಕಗಳ ಕುರಿತು ಚರ್ಚೆ ನಡೆಸುತ್ತೇವೆ ಎಂದು ನ್ಯಾಯಾಲಯವು ಹೇಳಿದೆ.

ಪ್ರಧಾನಿ ಮೋದಿಯವರು ಮಾತ್ರ ಚರ್ಚೆ ನಡೆಸಲಿಲ್ಲ ಎಂದು ರೈತರು ಹೇಳುತ್ತಿದ್ದಾರೆಂದು ರೈತರ ಪರ ವಕೀಲ ಎಮ್‌ಎಲ್ ಶರ್ಮಾ ನ್ಯಾಯಾಧೀಶರ ಗಮನಕ್ಕೆ ತಂದಾಗ, ಮುಖ್ಯ ನ್ಯಾಯಮೂರ್ತಿಗಳು, ಪ್ರಧಾನಿಯನ್ನು ಪ್ರತಿಭಟನಾ ಸ್ಥಳಕ್ಕೆ ತೆರಳಿ ಎಂದು ಹೇಳಲು ನಮಗೆ ಸಾಧ್ಯವಿಲ್ಲ ಎಂದು ಹೇಳಿದರು.

Share This Article
Leave a comment