UP ಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ಮಧ್ಯಂತರ ತಡೆ ನೀಡದ ಸುಪ್ರೀಂ

Team Newsnap
1 Min Read

ಉತ್ತರ ಪ್ರದೇಶದ ಬುಲ್ಡೋಜರ್ ಡೆಮಾಲಿಷನ್​ ಕಾರ್ಯಾಚರಣೆಗೆ ತಾತ್ಕಾಲಿಕ ತಡೆ ನೀಡಿದ ಸುಪ್ರೀಂ ಕೋರ್ಟ್ ಯೋಗಿ ಸರ್ಕಾರಕ್ಕೆ ನೋಟಿಸ್ ಕೊಟ್ಟಿದೆ

ಉತ್ತರ ಪ್ರದೇಶ ಸರ್ಕಾರ ನಡೆಸಿರುವ ಬುಲ್ಡೋಜರ್ ಅಸ್ತ್ರ’ಕ್ಕೆ ತಡೆ ನೀಡುವಂತೆ ಕೋರಿ ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ಸುಪ್ರೀಂ ಕೋರ್ಟ್‌ ಇಂದು ನಡೆಸಿತು. ಇದನ್ನು ಓದಿ – ವಿಧಾನಪರಿಷತ್ ಸದಸ್ಯರಾಗಿ 7 ಸದಸ್ಯರು ಪ್ರಮಾಣವಚನ ಸ್ವೀಕಾರ

ವಿಚಾರಣೆ ಬಳಿಕ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್ ನೀಡಿ ಮೂರು ದಿನಗಳೊಳಗೆ ಉತ್ತರ ನೀಡುವಂತೆ ಸೂಚಿಸಿದೆ.

ಬುಲ್ಡೋಜರ್ ಕ್ರಮಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ಒಪ್ಪಿಲ್ಲ. ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡು ಬುಲ್ಡೋಜರ್ ಅಸ್ತ್ರವನ್ನು ಪ್ರಯೋಗಿಸುತ್ತಿದೆ ಎಂದು ಆರೋಪಿಸಿ ಉಲೇಮಾ-ಎ-ಹಿಂದ್ ಅರ್ಜಿ ಸಲ್ಲಿಸಿತ್ತು. ಇದನ್ನು ಓದಿ – ಮಧು ಜಿ ಮಾದೇಗೌಡರಿಗೆ ಜಯ:ಮೈಸೂರು ವಿಭಾಗದಲ್ಲೇ ಕಾಂಗ್ರೆಸ್ ನಲ್ಲಿ ಹೊಸ ಹುರುಪು- ಹೊಸ ಭರವಸೆ

ಉತ್ತರ ಪ್ರದೇಶ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಸಿಗಲಿದೆ. ಈ ಮಧ್ಯೆ ನಾವು ಅರ್ಜಿದಾರರ ಸುರಕ್ಷತೆಯನ್ನ ಖಚಿತಪಡಿಸಿಕೊಳ್ಳಬೇಕಿದೆ. ಅವರೂ ಕೂಡ ಸಮಾಜಕ್ಕೆ ಸೇರಿದವರು. ಯಾರಿಗಾದರೂ ಸಮಸ್ಯೆ ಆದಾಗ ಅದನ್ನ ಪರಿಶೀಲಿಸುವ ಹಕ್ಕು ಅವರಿಗೆ ಇದೆ. ಡೆಮಾಲಿಷನ್ಸ್​ ಕಾನೂನು ಪ್ರಕಾರವೇ ನಡೆದಿರಬಹುದು. ಮುಂದಿನ ವಾರ ಈ ಬಗ್ಗೆ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್​ ಹೇಳಿದೆ. ಇದನ್ನು ಓದಿ – ಡಿಸಿ ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಮುಖ್ಯಪೇದೆ

ಮುಂದಿನ ವಿಚಾರಣೆಯು ಮಂಗಳವಾರ ನಡೆಯಲಿದೆ. ನ್ಯಾಯಮೂರ್ತಿ ಎ.ಎಸ್ ಬೋಪಣ್ಣ ಮತ್ತು ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದಲ್ಲಿ ವಿಚಾರಣೆ ನಡೆಯಿತು.

Share This Article
Leave a comment