ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡುವ ಬಗ್ಗೆ ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ.
ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತಾ ನೇತೃತ್ವದ ದ್ವಿಸದಸ್ಯ ಪೀಠ, ಕೇಜ್ರಿವಾಲ್ ಪರ ಅಭಿಷೇಕ್ ಮನು ಸಿಂಘ್ವಿ ಮತ್ತು ಜಾರಿ ನಿರ್ದೇಶನಾಲಯದ ಎಸ್ ವಿ ರಾಜು ಅವರ ವಾದ ಮತ್ತು ಪ್ರತಿವಾದಗಳನ್ನು ಆಲಿಸಿದ ಸಂದರ್ಭದಲ್ಲಿ ಈ ಸೂಚನೆ ನೀಡಿದೆ.
ಆದರೆ, ಅವರಿಗೆ ಮಧ್ಯಂತರ ಜಾಮೀನು ನೀಡಬೇಕೆ ಅಥವಾ ಬೇಡವೇ ಎಂಬುದರ ಕುರಿತು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ
ವಿಚಾರಣೆಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆ ಇಲ್ಲದಿದ್ದರೆ ಮಧ್ಯಂತರ ಜಾಮೀನು ಮಂಜೂರು ಮಾಡುವ ಬಗ್ಗೆ ಪರಿಗಣಿಸಬಹುದು ಎಂದು ಎಲ್ಲಾ ಪಕ್ಷಗಳ ಪರವಾಗಿ ಹಾಜರಾಗುವ ವಕೀಲರಿಗೆ ಮಾತ್ರ ತಿಳಿಸುವುದಾಗಿ ಹೇಳಿದೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು