ಸುರತ್ಕಲ್ ಜಲೀಲ್‌ ಹತ್ಯೆ‌ – ಇಬ್ಬರು ಮಹಿಳೆಯರ ವಿಚಾರಣೆ : ಗಾಂಜಾ ಮಾಫಿಯಾದ ಕೈವಾಡ ?

Team Newsnap
1 Min Read
Suratkal Jalil's murder - interrogation of two women: ganja mafia?ಸುರತ್ಕಲ್ ಜಲೀಲ್‌ ಹತ್ಯೆ‌ – ಇಬ್ಬರು ಮಹಿಳೆಯರ ವಿಚಾರಣೆ : ಗಾಂಜಾ ಮಾಫಿಯಾದ ಕೈವಾಡ ?

ಮಂಗಳೂರಿನ ಸುರತ್ಕಲ್‌ ಕಾಟಿಪಳ್ಳದಲ್ಲಿ ನಡೆದ ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಲಾಗಿದೆ .

ಈ ಹತ್ಯೆಗೆ ಗಾಂಜಾ ಮಾಫಿಯಾದ ಕೈವಾಡದ ಶಂಕೆ ಇದೆ.ವಂಚಕರಿದ್ದಾರೆ ಎಚ್ಚರ (ಬ್ಯಾಂಕರ್ಸ್ ಡೈರಿ)

ವ್ಯಾಪಾರಿ ಜಲೀಲ್ ಹತ್ಯೆಯ ನಡೆಸಿ ಪರಾರಿಯಾದ ಇಬ್ಬರು ದುಷ್ಕರ್ಮಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು ಹಲವರನ್ನು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ವಿಚಾರಣೆ ನಡೆಸಿದ್ದಾರೆ.

ಕಳೆದ ಶನಿವಾರ ಸಂಜೆ ಇಬ್ಬರು ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಜಲೀಲ್ ಜೊತೆ ಕೆಲ ಕಾಲ ಮಾತಿನ ಚಕಮಕಿ ನಡೆಸಿದ ಬಳಿಕ ಏಕಾಏಕಿ ಚೂರಿಯಿಂದ ಇರಿದು ಪರಾರಿಯಾಗಿದ್ದರು.

ಈ ಬಗ್ಗೆ ಅಲ್ಲೇ ಇದ್ದ ಪ್ರತ್ಯಕ್ಷದರ್ಶಿಗಳು ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಆರೋಪಿಗಳು ಯಾರು ಎನ್ನುವುದರ ಬಗ್ಗೆ ಯಾವುದೇ ಸ್ಪಷ್ಟ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ.

ಅನುಮಾನ ಇದ್ದ ಹಲವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಈ ನಡುವೆ ಸುರತ್ಕಲ್ ಠಾಣೆಗೆ ಇಬ್ಬರು ಮಹಿಳೆಯರನ್ನು ಕರೆಸಿಕೊಂಡ ಪೊಲೀಸರು ಸಾಕಷ್ಟು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಕೊಲೆಯ ಕಾರಣಗಳ ಬಗ್ಗೆ ಪೊಲೀಸರಿಗೆ ಮಹತ್ವದ ಮಾಹಿತಿ ಸಿಕ್ಕಿದೆ ಎನ್ನಲಾಗಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ತನಿಖೆ ಪೂರ್ಣಗೊಳ್ಳುವುವರೆಗೂ ಯಾವುದನ್ನೂ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಶೀಘ್ರದಲ್ಲೇ ಆರೋಪಿಗಳ ಬಂಧನ ಆಗಲಿದೆ ಎಂದಷ್ಟೇ ಹೇಳಿದ್ದಾರೆ.

Share This Article
Leave a comment