ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕೆ ಇಳಿಯೋಣ – ಸೋತರೆ ಶಿರಚ್ಛೇದನ – ಸುರೇಶ್ ಗೌಡ , CRS ಗೆ LRS ಸವಾಲು

Team Newsnap
1 Min Read
Sacrificed Nikhil to finish me politically- Former MP LR Shivaramegowda ನನ್ನನ್ನು ರಾಜಕೀಯವಾಗಿ ಮುಗಿಸಲು ನಿಖಿಲ್‍ರನ್ನು ಬಲಿ ಕೊಟ್ರು- ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ

ಪಕ್ಷೇತರ ಅಭ್ಯರ್ಥಿಗಳಾಗಿ ನಾವು ಕಣಕ್ಕೆ ಇಳಿಯೋಣ, ನಾನು ಗೆಲ್ಲದಿದ್ದರೆ ಶಿರಚ್ಛೇದನ ಮಾಡಿಕೊಳ್ಳುವೆ ಎಂದು ಮಾಜಿ ಸಂಸದ ಶಿವರಾಮೇಗೌಡರು ಬಹಿರಂಗ ಸವಾಲು ಹಾಕಿ ಶಪಥ ಮಾಡಿದ್ದಾರೆ.

ಮದ್ದೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾಗಮಂಗಲ ಶಾಸಕ ಸುರೇಶ್ ಗೌಡ ಮತ್ತು ಮಾಜಿ ಸಚಿವ ಎನ್. ಚಲುವರಾಯಸ್ವಾಮಿಗೆ ಬಹಿರಂಗ ಸವಾಲು ಹಾಕುತ್ತೇನೆ , ನೀವಿಬ್ರು ಪಕ್ಷ ಬಿಟ್ಟು ನನ್ನ ವಿರುದ್ಧ ಸ್ಪರ್ಧಿಸಿ ಗೆಲ್ಲಿ , ನಾಗಮಂಗಲದಲ್ಲಿ ಈ ಬಾರಿ ಸುರೇಶ್ ಗೌಡರೇ ಅಭ್ಯರ್ಥಿಯಾದ್ರೆ ಜೆಡಿಎಸ್ ಸೋಲುತ್ತೆ ಎಂದು ಭವಿಷ್ಯ ನುಡಿದರು.

ಜೈಲಿನಲ್ಲಿರುವ ಮುರುಘಾ ಸ್ವಾಮೀಜಿಗೆ ಬಿಗ್ ಶಾಕ್: ಮುರುಘಾ ಮಠ ಸರ್ಕಾರ ಅಧೀನಕ್ಕೆ

ನಾಗಮಂಗಲದಲ್ಲಿ ಅಭ್ಯರ್ಥಿ ಬದಲಿಸದಿದ್ದರೆ ನಾಗಮಂಗಲಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಯಾರೇ ಬಂದರೂ ಸುರೇಶ್ ಗೌಡ ಗೆಲ್ಲಲ್ಲ. ಪಕ್ಷದ ಮೇಲೆ ನಿಂತರೆ ಯಾರ್ ಬೇಕಾದ್ರು ಗೆಲ್ತಾರೆ ಬನ್ನಿ ಪಕ್ಷೇತರರಾಗಿ ನಿಲ್ಲೋಣ ಎಂದು ಆಹ್ವಾನಿಸಿದರು.

ಈ ಹಿಂದೆ ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ ಆಗಿತ್ತು ನಿಜ. ಆದರೆ, ಕೆಲವರ ದುರ್ವರ್ತನೆಯಿಂದ ಜೆಡಿಎಸ್ ಭದ್ರಕೋಟೆ ಸ್ವಲ್ಪ ಸ್ವಲ್ಪವಾಗಿ ಕುಸಿಯುತ್ತಿದೆ. ನನಗೆ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಯುವ ನಾಯಕ ನಿಖಿಲ್ ಬಗ್ಗೆ ಅಪಾರ ಗೌರವ ಇದೆ. ಅವರ ಬಗ್ಗೆ ನಾನು ಹಗರುವಾಗಿ ಮಾತನಾಡುವುದಿಲ್ಲ ಎಂದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ಸುರೇಶ್ ಗೌಡರಿಗೆ ಜೆಡಿಎಸ್ ಟಿಕೆಟ್ ನೀಡಿದರೇ ಸೋಲು ಕಟ್ಟಿಟ್ಟಬುತ್ತಿ. ಜೆಡಿಎಸ್ ಪಕ್ಷ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೇ ಮಾತ್ರ ಗೆಲುವು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.

Share This Article
Leave a comment