ಸದ್ಯ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಶುರುವಾಗಿದೆ. ಜುಲೈ 15ರಿಂದ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವ ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ ಕುಮಾರ್ ತುಮಕೂರಿನಲ್ಲಿ ಹೇಳಿದರು.
ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ಸೋಂಕಿನ ಭೀತಿಯ ನಡುವೆಯೂ ಮುಂದಿನ ಶೈಕ್ಷಣಿಕ ವರ್ಷ ಆರಂಭಿಸುವುದಕ್ಕೆ ತುರ್ತು ಪರಿಸ್ಥಿತಿ ಬಂದೊದಗಿದೆ ಎಂದು ತಿಳಿಸಿದರು.
ಮಾರ್ಚ್ 1ನೇ ತಾರೀಖಿನಿಂದ 1-5ನೇ ತರಗತಿ ಆರಂಭಿಸುವ ಇಚ್ಛೆ ಇತ್ತು. ಆದರೆ ಚರ್ಚೆ ಮಾಡಿ, ಬೇಡ ಎಂಬ ಅಭಿಪ್ರಾಯಕ್ಕೆ ಬಂದಿದ್ದೇವೆಎಂದು ಮಾಹಿತಿ ನೀಡಿದರು.
ರಾಜ್ಯದಲ್ಲಿ ಶಾಲೆ ಆರಂಭವಾಗದ ಕಾರಣದಿಂದ ಮಕ್ಕಳು ಗಣಿತವನ್ನೇ ಮರೆತಿದ್ದಾರೆ. ಪಠ್ಯ ವಿಷಯ ಸೇರಿದಂತೆ ಭಾಷೆ ಮರೆತಿದ್ದಾರೆ. ಇದರ ಬಗ್ಗೆ ಅಜೀಂ ಪ್ರೇಮ್ ಜಿ ವಿವಿ ನೀಡಿರುವ ವರದಿ ಆಘಾತಕಾರಿಯಾಗಿದೆ. ಹೀಗಾಗಿ ಜುಲೈ 15 ರಿಂದ 2021-22ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ