ಸ್ಯಾಂಡಲ್ವುಡ್ ನಟ ದಿಗಂತ್ ಗೋವಾದ ಬೀಚ್‌ನಲ್ಲಿ ಸೋಮರ್ ಸಾಲ್ಟ್ ( ಪಲ್ಟಿ ಹೊಡೆಯುವಾಗ ) ಬೆನ್ನು ಮೂಳೆಗೆ ಬಲವಾದ ಪೆಟ್ಟು ಬಿದ್ದಿತ್ತು. ಸದ್ಯ ನಟ ದಿಗಂತ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ನಿನ್ನೆ ರಾತ್ರಿ ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ. ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ದಿಂಗತ್-ಐಂದ್ರಿತಾ ದಂಪತಿ ಈ ಬಾರಿ ವೀಕೆಂಡ್ ಟ್ರಿಪ್‌ಗೆ ಗೋವಾಗೆ ತೆರಳಿದ್ದರು, ಗೋವಾದ ಬೀಚ್‌ನಲ್ಲಿ ಸೋಮರ್ ಸಾಲ್ಟ್ ಮಾಡುವಾಗ ನಟ ದಿಗಂತ್ ಬೆನ್ನು ಮೂಳೆಗೆ ಬಲವಾಗಿ ಪೆಟ್ಟು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಟ ದಿಗಂತ್‌ಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಇದನ್ನು ಓದಿ – ಗೋವಾದಲ್ಲಿ ಅವಘಡ : ನಟ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು : ಬೆಂಗಳೂರಿಗೆ ಏರ್ ಲಿಪ್ಟ್
ನಟ ದಿಗಂತ್ ಸ್ಪೋರ್ಟ್ಸ್ ಇಂಜುರಿಯಿಂದ ಬಳಲುತ್ತಿದ್ದಾರೆ ಅಂತಾ ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಈಗಾಗಲೇ ದಿಗಂತ್‌ಗೆ ಅಪರೇಷನ್ ಮಾಡಿ ಮುಗಿಸಿರುವ ವೈದ್ಯರು, ಸದ್ಯ ದಿಗಂತ ಔಟ್ ಆಫ್ ಡೇಂಜರ್ ಎಂದಿದ್ದಾರೆ ಇವತ್ತು ಬೆಳಗ್ಗೆ 10 ಗಂಟೆವರೆಗೂ ಅಬ್ಸರ್ವೇಷನ್‌ನಲ್ಲಿ ಇಡಲಾಗುತ್ತದೆ. ಬಳಿಕ ಹತ್ತು ಗಂಟೆಯ ಬಳಿಕ ಎರಡನೇ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಲಾಗುತ್ತೆ ಅಂತಾ ಮಣಿಪಾಲ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.
- ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
- ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
- ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ
- ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ: ಚುನಾವಣೆಯ ಮೂಲಕ ತೀರ್ಮಾನ
- ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
More Stories
ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ: DYSP ವಿರುದ್ಧ ಗಂಭೀರ ಆರೋಪ
ಐಶ್ವರ್ಯ ಗೌಡ ಪ್ರಕರಣ: ಸರ್ಕಾರದ ವಿರುದ್ಧ ಹೆಚ್ಡಿಕೆ ವಾಗ್ದಾಳಿ
ಸಾರಿಗೆ ನೌಕರರಿಗೆ ಸರ್ಕಾರದ ಭರವಸೆ: 2 ಸಾವಿರ ಕೋಟಿ PF ನಿಧಿ ಬಿಡುಗಡೆ