ಸಿಐಡಿ ಡಿವೈಎಸ್ಪಿ ಲಕ್ಷ್ಮೀ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣ ನೆನಪಿನಿಂದ ಮಾಸುವ ಮುನ್ನವೇ ಮಕ್ಕಳ ಅಗಲಿಲ್ಲ ಎಂಬ ಕಾರಣಕ್ಕಾಗಿ ಪೊಲೀಸ್ ದಂಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಶುಕ್ರವಾರ ಜರುಗಿದೆ.
ಪೊಲೀಸ್ ಪೇದೆಗಳಾದ ಶೀಲಾ ಹಾಗೂ ಹೆಚ್.ಸಿ. ಸುರೇಶ್ ನೇಣಿಗೆ ಶರಣಾಗಿದ್ದಾರೆ.
ಕಳೆದ ಹತ್ತು ವರ್ಷದ ಹಿಂದೆ ಶೀಲಾ ಮತ್ತು ಸುರೇಶ್ ಮದುವೆಯಾಗಿದ್ದರು. ಇಬ್ಬರದ್ದು ಪ್ರೇಮ ವಿವಾಹ ಮಾಡಿಕೊಂಡರು.
ಶೀಲಾ ಮೂಲತಃ ಚಿಕ್ಕಮಗಳೂರಿನವರು. ಸುರೇಶ್ ಕೋಲಾರ ಮೂಲದವರು. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸ್ ತನಿಖೆ ನಂತರ ಕಾರಣ ತಿಳಿಯಲಿದೆ.
ಶೀಲಾ ಕೊತ್ತನೂರು ಠಾಣೆಯಲ್ಲಿ ಹಾಗೂ ಸುರೇಶ್ ಸಂಪಿಗೆಹಳ್ಳಿ ಎಸಿಪಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆತ್ಮಹತ್ಯೆ ಪ್ರಕರಣ ಸಂಬಂಧ ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ