ಭೂಮಾಪನ ಕಚೇರಿಯ ಸರ್ವೇ ಅಧಿಕಾರಿ 10 ಸಾವಿರ ರು ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಮಿನಿ ವಿಧಾನಸೌಧದಲ್ಲಿನ ಭೂ ಮಾಪನ ಇಲಾಖೆಯ ಸರ್ವೇ ಸೂಪರ್ ವೈಸರ್ ಲೋಕೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ.
ಲೋಕೇಶ್ ವಿರುದ್ದ ಎಸಿಬಿ ಕಚೇರಿಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿದ್ದವು. ಸಾರ್ವಜನಿಕರ ದೂರಿನ ಅನ್ವಯ ಹಲವು ದಿನಗಳಿಂದ ಎಸಿಬಿ ಅಧಿಕಾರಿಗಳು ದಾಳಿ ನಡೆಸಬೇಕೆಂದು ಪ್ಲಾನ್ ಮಾಡುತ್ತಿದ್ದರು.
ರೈತನೋರ್ವ ತನ್ನ ಜಮೀನು ದುರಸ್ತಿಗೆ ಲೋಕೇಶ್ ಬಳಿ ಬಂದಾಗ 15 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದಾನೆ. ಆ ರೈತ ಅಡ್ವಾನ್ಸ್ 3 ಸಾವಿರ ರೂಪಾಯಿಯನ್ನು ಲೋಕೇಶ್‍ಗೆ ನೀಡಿದ್ದ.
ಬಳಿಕ ಎಸಿಬಿ ಅಧಿಕಾರಿಗಳಿಗೆ ಈ ಬಗ್ಗೆ ಮಾಹಿತಿ ನೀಡಿದ ವೇಳೆ ನೀನು ಉಳಿದ 10 ಸಾವಿರ ನೀಡು, ನಾವು ಅಧಿಕಾರಿಯನ್ನು ಅರೆಸ್ಟ್ ಮಾಡುತ್ತೇವೆ ಎಂದು ಹೇಳಿದ್ದಾರೆ.
ರೈತ ಇಂದು 10 ಸಾವಿರ ರುಗಳನ್ನು ಲೋಕೇಶ್‍ಗೆ ನೀಡುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲೋಕೇಶ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಈ ದಾಳಿ ಎಸಿಬಿ ಡಿವೈಎಸ್‍ಪಿ ಧರ್ಮೇಂದ್ರ ನೇತೃತ್ವದಲ್ಲಿ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು