ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ 5:17ರ ಸಮಯದಲ್ಲಿ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯನ ರಶ್ಮಿ ಗವಿ ಗಂಗಾಧರೇಶ್ವರ ಸ್ವಾಮಿಯನ್ನು ಸ್ಪರ್ಶಿಸುವ ಮೂಲಕ ಕಿರಣಾಭಿಷೇಕ ಮಾಡಿತು.
ಉತ್ತರಾಯಣ ಆರಂಭಗೊಳ್ಳುವ ಶುಭ ಘಳಿಗೆಯಲ್ಲಿ ಭಾಸ್ಕರ ತನ್ನ ಪಥ ಬದಲಿಸಿದ ಹಿನ್ನೆಲೆಯಲ್ಲಿ ಸೂರ್ಯ ರಶ್ಮಿ ಗವಿ ಗಂಗಾಧರೇಶ್ವರನನ್ನು ಸ್ಪರ್ಶಿಸಿತು.
ಈ ಐತಿಹಾಸಿಕ ನೆರಳು-ಬೆಳಕಿನಾಟಕ್ಕೆ ಬೆಂಗಳೂರಿನ ಗುಟ್ಟಳ್ಳಿಯ ಗವಿಗಂಗಾಧರ ದೇವಾಲಯ ಸಾಕ್ಷಿಯಾಯಿತು.
ಸೂರ್ಯನ ಕಿರಣ ಶಿವಲಿಂಗವನ್ನು ಸ್ಪರ್ಶಿಸುತ್ತಿದ್ದಂತೆ ಲಿಂಗಕ್ಕೆ ಹಾಲಿನ ಮಾಡಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಈ ಮಹಾ ಕೌತುಕವನ್ನು ಕಣ್ತುಂಬಿಕೊಳ್ಳಲು ಪ್ರತಿ ವರ್ಷ ದೇಗುಲದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ನೆರೆದಿರುತ್ತಿದ್ದರು. ಆದರೆ ಕೋವಿಡ್ ಕಾರಣದಿಂದಾಗಿ ಈ ಬಾರಿ ದೇಗುಲದಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಿಲ್ಲ. ಹೀಗಾಗಿ ಭಕ್ತರು ಮನೆಯಲ್ಲೇ ಇದ್ದು ಟಿವಿ ಮೂಲಕ ಕೌತುಕವನ್ನು ಕಣ್ತುಂಬಿಕೊಂಡಿದ್ದಾರೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ಬೆಂಕಿಗೆ ಆಹುತಿ – ಯುವತಿ ಸಜೀವ ದಹನ