ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಕುಟುಂಬದ ಆರು ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಲಖಿಸರಾಯ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಸುಶಾಂತ್ ಸಿಂಗ್ ಸಂಬಂಧಿಕರು ಪ್ರಯಾಣಿಸುತ್ತಿದ್ದ ಕಾರಿಗೆ ಎಲ್‍ಪಿಜಿ ಸಿಲಿಂಡರ್‌ಗಳನ್ನು ತುಂಬಿದ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ ಆರು ಜನರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಗಾಯಗೊಂಡ ನಾಲ್ವರನ್ನು ಇದೀಗ ಜಮುಯಿ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಲಾಲ್ಜಿತ್ ಸಿಂಗ್, ಅವರ ಇಬ್ಬರು ಮಕ್ಕಳಾದ ಅಮಿತ್ ಶೇಖರ್ ಅಲಿಯಾಸ್ ನೆಮಾನಿ ಸಿಂಗ್ ಮತ್ತು ರಾಮ್ ಚಂದ್ರ ಸಿಂಗ್, ಮಗಳು ಬೇಬಿ ದೇವಿ, ಸೊಸೆ ಅನಿತಾ ದೇವಿ ಮತ್ತು ಚಾಲಕ ಪ್ರೀತಂ ಕುಮಾರ್ ಎಂದು ಗುರುತಿಸಲಾಗಿದೆ.
ಬಿಹಾರದ ಹಲ್ಸಿ ಪೊಲೀಸ್ ಠಾಣೆ ವ್ಯಾಪ್ತಿಯ ಪಿಪ್ರಾ ಗ್ರಾಮದ ಬಳಿ ಸಿಕಂದರಾ-ಶೇಖ್‍ಪುರ ರಾಷ್ಟ್ರೀಯ ಹೆದ್ದಾರಿ-333ರಲ್ಲಿ ಈ ಅಪಘಾತ ಸಂಭವಿಸಿದೆ. ಸಂತ್ರಸ್ತರು ಸಂಬಂಧಿಕರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಪಾಟ್ನಾದಿಂದ ಜಮುಯಿಗೆ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ