ಬಂಧಿತನನ್ನು ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿದೆ. ಆತನನ್ನು ಸೈಫ್ ನಿವಾಸದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕಾಸರ್ವಾಡವಲಿಯ ಹಿರಾನಂದಾನಿ ಎಸ್ಟೇಟ್ ಬಳಿ ಬಂಧಿಸಲಾಗಿದೆ.
ಮೂಲಗಳ ಪ್ರಕಾರ, ಆರೋಪಿ ಥಾಣೆಯ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದನು. ಬಂಧನಕ್ಕೆ ಎದುರಾಗಿ, ಆತ ತನ್ನ ಹೆಸರನ್ನು ವಿಜಯ್ ದಾಸ್ ಎಂದು ಸುಳ್ಳು ಹೇಳಿದ್ದ ಎಂದು ತಿಳಿದುಬಂದಿದೆ.
ಗುರುವಾರ ಮುಂಜಾನೆ ಬಾಂದ್ರಾದಲ್ಲಿರುವ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ, ಆರೋಪಿ ಆರು ಬಾರಿ ಚಾಕುವಿನಿಂದ ಇರಿದಿದ್ದ. ಗಾಯಗೊಂಡ ಸೈಫ್ ಅವರನ್ನು ತಕ್ಷಣ ಆಟೋರಿಕ್ಷಾದ ಮೂಲಕ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ತುರ್ತು ಶಸ್ತ್ರಚಿಕಿತ್ಸೆ ನೆರವಿನಿಂದ 2.5 ಇಂಚು ಚಾಕುವಿನ ತುಂಡನ್ನು ಅವರ ಬೆನ್ನುಮೂಳೆಯಿಂದ ತೆಗೆದುಹಾಕಿ ಐದು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಲಾಯಿತು.ಇದನ್ನು ಓದಿ –ವಿಜಯ್ ಹಜಾರೆ ಟ್ರೋಫಿ 2025: ವಿದರ್ಭವನ್ನು ಮಣಿಸಿ 5ನೇ ಬಾರಿ ಚಾಂಪಿಯನ್ ಆದ ಕರ್ನಾಟಕ
ಈಗ ಸೈಫ್ ಅಲಿ ಖಾನ್ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶನಿವಾರ ಮತ್ತೊಬ್ಬ ಶಂಕಿತ ಆಕಾಶ್ ಕೈಲಾಶ್ ಕನ್ನೋಜಿಯಾನನ್ನು ಛತ್ತೀಸ್‌ಗಢದ ದುರ್ಗ್ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು