ಮೈಸೂರು: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದೆ. ಮೈಸೂರಿನ ನಂಜನಗೂಡು ತಾಲೂಕಿನ ಮಲ್ಕುಂಡಿ ಗ್ರಾಮದಲ್ಲಿ ವಾಮಾಚಾರಕ್ಕೆ ಸಂಬಂಧಿಸಿದಂತೆ 43 ವರ್ಷದ ವ್ಯಕ್ತಿಯೊಬ್ಬರನ್ನು ನರಬಲಿ ನೀಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು ಸದಾಶಿವ ಎಂದು ಗುರುತಿಸಲಾಗಿದ್ದು, ಅವರ ಶವ ಕತ್ತು ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ.
ಶವದ ಬಳಿ ರಕ್ತ, ನಿಂಬೆಹಣ್ಣು, ಎಲೆ, ಅಡಿಕೆ ಸೇರಿದಂತೆ ಮಾಟ-ಮಂತ್ರದಲ್ಲಿ ಬಳಸುವ ವಸ್ತುಗಳು ಪತ್ತೆಯಾಗಿವೆ.ಇದನ್ನು ಓದಿ –ಮುಡಾ ಹಗರಣ: ಮೈಸೂರು ಮುಡಾ ಕಚೇರಿ ಮೇಲೆ ಇ.ಡಿ ದಾಳಿ
ಸ್ಥಳಕ್ಕೆ ತಕ್ಷಣವೇ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
More Stories
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ