ಪೀಠ ಅಲಂಕರಿಸುವ ಸ್ವಾಮೀಜಿ ಸಮಾಜಕ್ಕೆ ಮಾದರಿಯಾಗಿ ಬದುಕಬೇಕು.ಆದರೆ ರಾಮನಗರದ ಮಾಗಡಿ ತಾಲೂಕಿನ ಸೋಲೂರಿನಗದ್ದುಗೆ ಮಠದಲ್ಲಿ ಎಲ್ಲವೂ ಅಯೋಮಯವಾಗಿದೆ.
ಈ ಮಠದ ಶಿವಮಹಂತ ಸ್ವಾಮೀಜಿಯವರು ಇದೀಗ ಸನ್ಯಾಸತ್ವ ತ್ಯಜಿಸಿ, ಮಠ ಬಿಟ್ಟು ನಾಪತ್ತೆಯಾಗಿದ್ದಾರೆ. ಜೊತೆಗೆ ಪತ್ರವೊಂದನ್ನು ಬರೆದಿಟ್ಟು, ತಾವು ಮಠ ಬಿಟ್ಟು ಹೋಗಲು ಕಾರಣವಾದ ವಿಚಾರವನ್ನು ತಿಳಿಸಿದ್ದಾರೆ. ಸ್ವಾಮೀಜಿ ನಾಪತ್ತೆಯಾಗಿರುವ ವಿಚಾರ ತಿಳಿದು ಮಠದ ಭಕ್ತರು, ಗ್ರಾಮಸ್ಥರೆಲ್ಲ ಆಘಾತಕ್ಕೆ ಒಳಗಾಗಿದ್ದಾರೆ.
ಸೋಲೂರಿನ ಗದ್ದುಗೆ ಮಠದ ಶಿವಮಹಂತ ಸ್ವಾಮೀಜಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಇವರ ಮೂಲ ಅಥವಾ ಗೃಹಸ್ಥಾಶ್ರಮದ ಹೆಸರು ಹರೀಶ್. ಇದೀಗ ಗದ್ದುಗೆ ಮಠದಲ್ಲಿದ್ದ ಶಿವಮಹಂತ ಸ್ವಾಮೀಜಿ ಸನ್ಯಾಸತ್ವ ತ್ಯಜಿಸಿ, ಪತ್ರ ಬರೆದಿಟ್ಟು ಮಠದಿಂದ ನಾಪತ್ತೆಯಾಗಿದ್ದಾರೆ.
ಸ್ವಾಮೀಜಿ ಯುವತಿಯೊಬ್ಬಳ ಜೊತೆ ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ. ಮದುವೆಯಾಗಿದ್ದವಳ ಜೊತೆ ಸ್ವಾಮೀಜಿ ತೆರಳಿದ್ದಾರೆ ಅಂತ ಹೇಳಲಾಗುತ್ತಿದೆ.
ಹರೀಶ್ ಅಂತ ಇವರು ಮೂಲ ಹೆಸರಾಗಿದ್ದು, ಸ್ವಾಮೀಜಿಯಾದ ಮೇಲೆ ಶಿವಮಹಂತ ಸ್ವಾಮೀಜಿ ಅಂತ ಹೆಸರು ನೀಡಲಾಗಿತ್ತು. ಕಳೆದ ಎರಡು ವರ್ಷಗಳ ಹಿಂದಷ್ಟೇ ಮಠದ ಪೀಠಾಧಿಪತಿಯಾಗಿ ನೇಮಕಗೊಂಡಿದ್ದರು. ಇದೀಗ ಇವರು ಮದುವೆಯಾಗಿ ಒಂದೂವರೆ ತಿಂಗಳಾಗಿದ್ದ ಯುವತಿ ಒಬ್ಬಳ ಜೊತೆಗೆ ಎಸ್ಕೇಪ್ ಆಗಿದ್ದಾರೆ ಎಂಬ ವದಂತಿ ಹಬ್ಬಿದೆ. ಇನ್ನು ಸ್ವಾಮೀಜಿ ಮಠದಿಂದ ತೆರಳುವ ಮುನ್ನ ಪತ್ರವೊಂದನ್ನು ಬರೆದಿದ್ದಾರೆ.
ತನಗೆ ಸನ್ಯಾಸತ್ವ ಇಷ್ಟವಿಲ್ಲ, ನಾನು ಮಠ ಬಿಟ್ಟು ಹೋಡಿಹೋಗ್ತಿದ್ದೀನಿ ಅಂತ ಪತ್ರ ಬರೆದಿಟ್ಟು ಪರಾರಿಯಾಗಿದ್ದಾರೆ. ನಾನು ಯಾರ ಕೈಗೂ ಸಿಗುವುದಿಲ್ಲ ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರದಲ್ಲಿ ಹೇಳಿದ್ದಾರೆ.
ನಾನು ನನ್ನ ಸ್ವಾಮೀಜಿ ಜೀವನ ತ್ಯಜಿಸುತ್ತಿದ್ದೇನೆ. ಕಾರಣ ನನ್ನ ಜೀವನದಲ್ಲಿ ನೆಮ್ಮದಿ ಇಲ್ಲದಂತಾಗಿದೆ. ಈ ಕಾರಣಕ್ಕಾಗಿ ನಾನು ಇದನ್ನೆಲ್ಲಾ ಬಿಟ್ಟು ದೂರ ಹೋಗುತ್ತಿದ್ದೇನೆ. ನನಗೆ ಈ ಜೀವನ ಜಿಗುಪ್ಸೆ ಉಂಟು ಮಾಡಿದೆ. ಈ ಕಾರಣ ನಿಮಗೆಲ್ಲ ಗೊತ್ತಿದೆ ಅಂತ ಭಾವಿಸುತ್ತೇನೆ. ದಯವಿಟ್ಟು ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ. ನಾನು ಕಾವಿ ಬಟ್ಟೆಯನ್ನು ತ್ಯಜಿಸಿದ ಮೇಲೆ ಮತ್ತೆಂದೂ ತೊಡುವುದಿಲ್ಲ. ಹಾಗೇನಾದರೂ ನನ್ನನ್ನು ಹುಡುಕುವ ಪ್ರಯತ್ನ ಮಾಡಿದರೆ ನನ್ನ ಹೆಣವನ್ನು ನೀವು ನೋಡುತ್ತೀರಿ ಅಂತ ಪತ್ರದಲ್ಲಿ ಸ್ವಾಮೀಜಿ ಎಚ್ಚರಿಸಿದ್ದಾರೆ.
ಈ ಹಿಂದೆ ಇದೇ ಸ್ವಾಮೀಜಿ ಬೇರೆ ಮಠದಲ್ಲಿರುವಾಗ ಯುವತಿಯೊಂದಿಗೆ ಪ್ರೀತಿಯಲ್ಲಿ ಬಿದ್ದಿದ್ದರು ಎನ್ನಲಾಗಿದೆ. ಆಕೆಗೆ ಕಳೆದ ಒಂದೂವರೆ ತಿಂಗಳ ಹಿಂದೆ ಮದುವೆಯಾಗಿತ್ತು ಅಂತ ಹೇಳಲಾಗುತ್ತಿದೆ. ಅದೇ ಹುಡುಗಿ ಜೊತೆ ಶಿವಮಹಂತಸ್ವಾಮಿ ಅಲಿಯಾಸ್ ಹರೀಶ್ ಪರಾರಿಯಾಗಿರುವ ಶಂಕೆ ಇದೆ. ಇದೀಗ ಕುದೂರು ಠಾಣೆಯಲ್ಲಿ ಸ್ವಾಮೀಜಿ ಮಿಸ್ಸಿಂಗ್ ಕೇಸ್ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು