Karnataka

ಬಂಡೆಮಠದ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ – ಕಣ್ಣೂರು ಶ್ರೀ, ಯುವತಿಯ ಬಂಧನ

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೆ ಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಣೂರು ಮೃತ್ಯಂಜಯ ಶ್ರೀ ,ಸ್ಥಳೀಯ ಮುಖಂಡ ಮಹಾದೇವಯ್ಯ ಹಾಗೂ ಓರ್ವ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಸವಲಿಂಗ ಶ್ರೀಗಳು ಆತ್ಮಹತ್ಯೆಗೂ ಮುನ್ನ ಡೆತ್‍ನೋಟ್‍ನಲ್ಲಿ ಮೂರು ಪುಟಗಳಲ್ಲಿ ಸವಿಸ್ತಾರವಾಗಿ ಮಾಹಿತಿ ನೀಡಿದ್ದರು.ಬೆಂಗಳೂರನಲ್ಲಿ ಹಿರಿಯನಟಿ ವಿನಯ ಪ್ರಸಾದ್ ಮನೆ ಕಳ್ಳತನ : 7 ಸಾವಿರ ಕದ್ದ ಖದೀಮರು

21ವರ್ಷದ ಯುವತಿಯನ್ನು ಬಿಟ್ಟು ಕಣ್ಣೂರು ಶ್ರೀಗಳು ಹನಿಟ್ರ್ಯಾಪ್ ಮಾಡಿಸಿರುವ ಕುರಿತು ಹಾಗೂ ಕಣ್ಣೂರು ಶ್ರೀಗಳ ಷಡ್ಯಂತ್ರ್ಯದ ಬಗ್ಗೆಯೂ ಡೆತ್‍ನೋಟ್‍ನಲ್ಲಿ ಉಲ್ಲೇಖಿಸಿದ್ದರು. ಅಷ್ಟೇ ಅಲ್ಲದೇ ಕಣ್ಣೂರು ಸ್ವಾಮೀಜಿ ಹಾಗೂ ಇತರ ಏಳೆಂಟು ಮಂದಿಯಿಂದ ಕಿರುಕುಳ ಎದುರಾಗಿದೆ. ಅವರು ಮಠದ ವಿಚಾರದಲ್ಲಿ ಆಗಾಗ ತೊಂದರೆ ಉಂಟುಮಾಡುತ್ತಿದ್ದಾರೆ. ನನ್ನ ಸಾವಿಗೆ ಗೊತ್ತಿಲ್ಲದಿರುವ ಆ ಯುವತಿಯೇ ಕಾರಣ ಎಂದು ಸಾವಿಗೂ ಮೊದಲು ಬಂಡೆ ಮಠದ ಶ್ರೀಗಳು ಡೆತ್ ನೋಟ್ ಬರೆದಿಟ್ಟಿದ್ದರು.

ಈ ಹಿನ್ನೆಲೆಯಲ್ಲಿ ರಾಮನಗರ ಪೊಲೀಸರು ವಿಚಾರಣೆಯನ್ನು ಚುರುಕುಗೊಳಿಸಿದ್ದರು. ಈ ವೇಳೆ ಬೆಂಗಳೂರು ಮೂಲದ ಮಹಿಳೆಯನ್ನು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕಣ್ಣೂರು ಶ್ರೀ ಹಾಗೂ ಬಂಡೆ ಮಠದ ಶ್ರೀಗಳು ಸಂಬಂಧಿಗಳಾಗಿರುವ ವಿಷಯ ಬೆಳಕಿಗೆ ಬಂದಿದೆ. ಅಪ್ಪು ಸ್ಮರಣೆಯಲ್ಲಿ ಪಾಲ್ಗೊಂಡಿದ್ದ ಮಂಡ್ಯದ ಯುವಕ ಆತ್ಮಹತ್ಯೆಗೆ ಶರಣು

ಈ ವೇಳೆ ಕಣ್ಣೂರು ಶ್ರೀ ಪೀಠಕ್ಕಾಗಿ ಷಡ್ಯಂತ್ರ ನಡೆಸಿದ್ದ ವಿಷಯವು ಬೆಳಕಿಗೆ ಬಂದಿದ್ದು, ಕಣ್ಣೂರು ಶ್ರೀಗಳನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಇದಲ್ಲದೆ ಸ್ವಾಮೀಜಿ ಜೊತೆ ಏಳೆಂಟು ಮಂದಿ ಸಹ ಕೈಜೋಡಿಸಿರುವ ಬಗ್ಗೆ ಮೂಲಗಳು ತಿಳಿಸಿವೆ.

Team Newsnap
Leave a Comment
Share
Published by
Team Newsnap

Recent Posts

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024