ಪಾಂಡವಪುರ ತಾಲ್ಲೂಕಿನ ಬನಘಟ್ಟ ಬಳಿಯ ವಿಸಿ ನಾಲೆಗೆ ಕಾರು ಬಿದ್ದು ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಕಾರಿನಲ್ಲಿದ್ದ ನಾಲ್ವರೂ ಕೂಡ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಪಾಂಡವಪುರ ತಾಲೂಕಿನ ಬನಘಟ್ಟದ ಬಳಿಯಲ್ಲಿ ವಿಸಿ ನಾಲೆಗೆ ಸ್ವಿಫ್ಟ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ವಿಸಿ ನಾಲೆಗೆ ಇಳಿದು ಪರಿಶೀಲನೆ ನಡೆಸುತ್ತಿದ್ದಾರೆ.
KRS ನಿಂದ ವಿಸಿ ನಾಲೆಗೆ ನಿನ್ನೆಯಿಂದ ನೀರು ಹರಿಸಲಾಗಿತ್ತು. ವಿಸಿ ನಾಲೆಗೆ ನೀರು ಬಿಟ್ಟ ಮರು ದಿನವೇ ಸ್ವಿಫ್ಟ್ ಕಾರು ಉರುಳಿ ಬಿದ್ದಿದೆ.
ದುರಂತ ಸ್ಥಳಕ್ಕೆ ಡಿಸಿ ಭೇಟಿ :
ಪಾಂಡವಪುರದ ಬನಘಟ್ಟದ ಬಳಿ ವಿಸಿ ನಾಲೆಗೆ ಕಾರು ಬಿದ್ದಿದ್ದು, ನಾಲೆಯಲ್ಲಿ ಇದರ ಹುಡುಕಾಟದ ಕೆಲಸ ನಡೆಯುತ್ತಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಇದ್ದರು .
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು